ಮೈಸೂರು: ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ಭಾನುವಾರ ಅಧಿಕಾರ ಸ್ವೀಕರಿಸಿದರು.

ಶಿಲ್ಪಾ ನಾಗ್ ಅವರು ಲಕ್ಷ್ಮೀಕಾಂತ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರೆಡ್ಡಿ ಅವರು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಇದನ್ನೂ ಓದಿ:ಅಧಿಕಾರಿಗಳ ಕಿತ್ತಾಟ: ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ಎತ್ತಂಗಡಿ

ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರು ಕೋವಿಡ್ ನಿರ್ವಹಣೆ ವಿಚಾರವಾಗಿ ರೋಹಿಣಿ ಸಿಂಧೂರಿ ಜತೆ ಜಟಾಪಟಿಗೆ ಇಳಿದಿದ್ದರು. ಜಿಲ್ಲಾಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಮಾಡಿದ್ದರಲ್ಲದೆ, ಪ್ರತಿಭಟನಾರ್ಥವಾಗಿ ಆಯುಕ್ತರ ಹುದ್ದೆ ಹಾಗೂ ಐಎಎಸ್ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದರು.

ಸರ್ಕಾರ ಶನಿವಾರ ರಾತ್ರಿ ಇಬ್ಬರನ್ನೂ ಎತ್ತಂಗಡಿ ಮಾಡಿತ್ತು. ಶಿಲ್ಪಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ:ಮೈಸೂರು: ಅಧಿಕಾರಿಗಳ ಮುಂದುವರಿದ ಜಟಾಪಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.