ಮೈಸೂರು: ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರವಾಸಿ ತಾಣಗಳು, ರೆಸಾರ್ಟ್‌ಗಳು, ಕನ್ವೆನ್ಷನ್‌ಹಾಲ್, ಪಾರ್ಟಿ, ರಿಕ್ರಿಯೇಷನ್ ಕ್ಲಬ್ ಹಾಗೂ ಚಿತ್ರಮಂದಿರ ಪ್ರವೇಶಕ್ಕೆ ಕೋವಿಡ್–19 ನೆಗೆಟಿವ್ ವರದಿ ತರುವುದನ್ನು ಕಡ್ಡಾಯ ಮಾಡಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

‘ಏ.10ರಿಂದ ಏ.20ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಅದಕ್ಕಾಗಿ 300 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗುತ್ತಿದೆ. ಈ ಸ್ಥಳಗಳಿಗೆ ಭೇಟಿ ನೀಡುವ 72 ಗಂಟೆಯೊಳಗೆ ಕೋವಿಡ್ ನೆಗೆಟಿವ್ ವರದಿ ಪಡೆದಿರಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗುರುವಾರ ತಿಳಿಸಿದರು.

‘ಈ ನಿಯಮ ಉಲ್ಲಂಘನೆಯಾದರೆ ಈ ಸ್ಥಳಗಳ ಅಧಿಕಾರಿಗಳು ಅಥವಾ ಮಾಲೀಕರೇ ಜವಾಬ್ದಾರಿ. ಅಂಥ ಸ್ಥಳಗಳನ್ನು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೆ ಮುಚ್ಚಲಾಗುವುದು. ವಿಪತ್ತು ನಿರ್ವಹಣೆ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಅಲ್ಲದೇ, ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೋವಿಡ್–19 ನೆಗೆಟಿವ್ ವರದಿ ಹೊಂದಿರುವುದು ಸೂಕ್ತವಾಗಿರುತ್ತದೆ ಎಂದು ಸಲಹೆ ನೀಡಿದ್ದಾರೆ.

Video: ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ ಪ್ರಧಾನಿ ನರೇಂದ್ರ ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.