ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್ರನ್ನು (32) ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು.

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಕೆಲವರಿಗೆ ಕಲ್ಲೇಟಿನಿಂದ ಗಾಯವಾಗಿದೆ. ಶಾಂತಿನಗರ ಮುಖ್ಯರಸ್ತೆ, ಮಹದೇವಪುರ ರಸ್ತೆ ಬಂದ್ ಮಾಡಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ, ಕೇಜ್ರಿವಾಲ್, ಅಖಿಲೇಶ್ ಯಾದವ್ ಅವರ ಅರೆನಗ್ನ ಫೋಟೊ ಸೃಷ್ಟಿಸಿ, ಅವರ ತೊಡೆಯಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುತ್ತಿರುವಂತೆ, ಬುರ್ಖಾ ಧರಿಸಿದ ಮಹಿಳೆಯಂತೆ ಚಿತ್ರಿಸಿದ್ದಾರೆ. ಮೈ ತುಂಬಾ ಅರೇಬಿಕ್ ಬರಹಗಳನ್ನು ಹಾಕಿದ್ದು, ಅದಕ್ಕೆ ತ್ರೀ ಈಡಿಯೆಟ್ಸ್ ಎಂಬ ಶೀರ್ಷಿಕೆ ನೀಡಿ ಹರಿಬಿಟ್ಟಿದ್ದಾರೆ’ ಎಂದು ಆರೋಪಿಸಿದರು.

ಅವಹೇಳನಕಾರಿ ಪೋಸ್ಟ್: ಠಾಣೆಗೆ ಮುತ್ತಿಗೆ

ಮೈಸೂರು: ‘ಸಾಮಾಜಿಕ ಜಾಲತಾಣದ ಪೋಸ್ಟ್ ಒಂದರಲ್ಲಿ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ’ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಸಾವಿರಾರು ಜನರು ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟಿಸಿದರು.

ರಾತ್ರಿ 8.30ರ ವೇಳೆಗೆ ಪ್ರತಿಭಟನಕಾರರು ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಶಾಂತಿನಗರ ಮುಖ್ಯರಸ್ತೆ, ಮಹದೇವಪುರ ರಸ್ತೆ ಬಂದ್ ಮಾಡಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಲಾಗಿದ್ದು, ಠಾಣೆಯ ಸುತ್ತ ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ವಿರುದ್ಧ ಕ್ರಮದ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.