ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ದಸರಾ: ಗಜಪಯಣ ಕಾರ್ಯಕ್ರಮ ಸೆ. 1ರಂದು

Published 30 ಆಗಸ್ಟ್ 2023, 13:20 IST
Last Updated 30 ಆಗಸ್ಟ್ 2023, 13:20 IST
ಅಕ್ಷರ ಗಾತ್ರ

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ ‘ಗಜಪಯಣ’ ಕಾರ್ಯಕ್ರಮ ಸೆ.1ರಂದು ಬೆಳಿಗ್ಗೆ 9.45ಕ್ಕೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ನಡೆಯಲಿದೆ.

ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಿದ್ಯುಕ್ತ ಚಾಲನೆ ನೀಡುವರು. ದಸರಾ-2023ರ ಆನೆಗಳ ಪಟ್ಟಿ ಮತ್ತು ಕಿರು ಪುಸ್ತಕವನ್ನು ಅರಣ್ಯ ಜೀವವಿಜ್ಞಾನ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬಿಡುಗಡೆ ಮಾಡುವರು. ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಸಂಗಪ್ಪ ತಂಗಡಗಿ, ಮೈಸೂರು ಮೇಯರ್‌ ಶಿವಕುಮಾರ್, ಸಂಸದರಾದ ಪ್ರತಾಪ ಸಿಂಹ, ಶ್ರೀನಿವಾಸ ಪ್ರಸಾದ್ ಹಾಗೂ ಸುಮಲತಾ ಅಂಬರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಲೋಕೇಶ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT