ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ದಸರಾ ವೆಬ್‌ಸೈಟ್, ‘ಯುವ ಸಂಭ್ರಮ’ ಪೋಸ್ಟರ್‌ ಅನಾವರಣ

Published : 21 ಸೆಪ್ಟೆಂಬರ್ 2024, 7:44 IST
Last Updated : 21 ಸೆಪ್ಟೆಂಬರ್ 2024, 7:44 IST
ಫಾಲೋ ಮಾಡಿ
Comments

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ವಿನ್ಯಾಸಗೊಳಿಸಿರುವ ವೆಬ್‌ಸೈಟ್ (https://www.mysoredasara.gov.in/) ಅನಾವರಣ ಹಾಗೂ ಯುವ ಸಂಭ್ರಮ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಇಲ್ಲಿನ ಅರಮನೆ ಮಂಡಳಿ ಕಚೇರಿಯಲ್ಲಿ ಶನಿವಾರ ಬಿಡುಗಡೆ ಮಾಡಿದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಎಸ್ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ಪಾಲ್ಗೊಂಡಿದ್ದರು.

ಯವ ಸಂಭ್ರಮ ಕಾರ್ಯಕ್ರಮವನ್ನು ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಸೆ. 24ರಿಂದ ಸೆ.30ರವರೆಗೆ ಆಯೋಜಿಸಲಾಗಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಅವಕಾಶ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT