ಮೈಸೂರು: ಬಿಜೆಪಿಯವರು ನವೆಂಬರ್ ಕ್ರಾಂತಿ ಎಂದು ಜಪ ಮಾಡುತ್ತಿದ್ದಾರೆ, ಮಾಡಲಿ ಬಿಡಿ. ಆದರೆ, ನಮ್ಮಲ್ಲಿ ಅಂತಹ ಯಾವ ಬೆಳವಣಿಗೆಗಳೂ ನಡೆದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಯಾವ ಯಾವ ನಂಬರ್ಗಳಿಂದ ಬೆದರಿಕೆ ಬಂದಿದೆ ಎಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ. ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.

ಅಂಥವರ ಮೇಲೆ ಕ್ರಮ ವಹಿಸದ ಹೊರತು, ಬೆದರಿಕೆ ಹಾಕುವ ಪ್ರಕರಣಗಳು ನಿಲ್ಲುವುದಿಲ್ಲ ಎಂದರು.

ಆರ್ಎಸ್ಎಸ್ ಕುರಿತು ಪ್ರಿಯಾಂಕ್ ಹೇಳಿದ್ದಾರೆ. ಆ ಬಗ್ಗೆ ಮುಖ್ಯಮಂತ್ರಿಯವರು ಚರ್ಚಿಸಿ ಕ್ರಮ ಕೈಗೊಳ್ಳುತ್ತಾರೆ. ಪತ್ರವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಾನು ಆ ಬಗ್ಗೆ ನಿರ್ಧಾರ ಹೇಳಲು ಸಾಧ್ಯವಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.