ಮೈಸೂರು: ಮೈಸೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದ್ದು, ನೂತನ್ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ ಆಯ್ಕೆಯಾಗಿದ್ದಾರೆ.

ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು.

ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಅಭ್ಯರ್ಥಿ ಕೆ.ವಿ.ಶ್ರೀಧರ್ ನಾಮಪತ್ರ ವಾಪಸ್ ಪಡೆದಿದ್ದರಿಂದ ಬಿಜೆಪಿ- ಕಾಂಗ್ರೆಸ್ ನಡುವೆ ಹಣಾಹಣಿ ಏರ್ಪಟ್ಟಿತ್ತು.

ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಹಸರತ್‌ಉಲ್ಲಾ 28 ಮತಗಳನ್ನು ಗಳಿಸಿದರು. ಬಿಜೆಪಿಯ ಶಿವಕುಮಾರ್ 47 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು.

ಇಲ್ಲಿ ಸತತ ಎರಡನೇ ಬಾರಿಗೆ ಬಿಜೆಪಿಯು ಮೇಯರ್ ಗಾದಿ ಪಡೆದಿದೆ. ಕೊನೆ ಕ್ಷಣದಲ್ಲಿ ಮೈತ್ರಿ ಏರ್ಪಟ್ಟಿದ್ದು, ಜೆಡಿಎಸ್ ಈ ಬಾರಿಯೂ ಉಪ ಮೇಯರ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಹೋದ ಬಾರಿ ಜೆಡಿಎಸ್‌ನವರು ಬಿಜೆಪಿಗೆ ಪರೋಕ್ಷ ಸಹಕಾರ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.