ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | 'ವ್ಯಾಪಾರಿಗಳ ಸಮಸ್ಯೆ ಪರಿಹಾರಕ್ಕೆ ಕ್ರಮ'

ಮಹಾನಗರಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್
Published : 13 ಆಗಸ್ಟ್ 2024, 4:57 IST
Last Updated : 13 ಆಗಸ್ಟ್ 2024, 4:57 IST
ಫಾಲೋ ಮಾಡಿ
Comments

ಮೈಸೂರು: ‘ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಪರಿಹಾರಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಾನಗರಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್ ತಿಳಿಸಿದರು.

ನಗರದ ವಿದ್ಯಾರಣ್ಯಪುರಂನ ಸೂಯೇಜ್‌ ಫಾರಂನಲ್ಲಿ ಮಹಾನಗರ ಪಾಲಿಕೆಯಿಂದ ವಾರ್ಡ್ ನಂ.61, ವಲಯ ಕಚೇರಿ 1ರಲ್ಲಿ ಪಟ್ಟಣ ವ್ಯಾಪಾರ ಸಮಿತಿ ಕಚೇರಿ ಹಾಗೂ ಕುಂದುಕೊರತೆ ನಿವಾರಣಾ ಸಮಿತಿ ಕಚೇರಿಯ ಉದ್ಘಾಟನೆಯನ್ನು ಸೋಮವಾರ ನೆರವೇರಿಸಿ ಅವರು ಮಾತನಾಡಿದರು.

‘ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಪರಿಹಾರಕ್ಕೆ ನಮ್ಮ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಿದ್ಧವಾಗಿದ್ದು, ಅವರು ಈ ನೂತನ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ವ್ಯಾಪಾರಿಗಳು ಸಮಸ್ಯೆಗಳಿದ್ದಲ್ಲಿ ಅವರಲ್ಲಿ ತಿಳಿಸಿ ನಿವಾರಣೆ ಮಾಡಿಕೊಳ್ಳಬಹುದಾಗಿದೆ’ ಎಂದರು.

‘ನೂತನ ಕಚೇರಿಯಲ್ಲಿ ನಗರದ ಬೀದಿ‌‌ ಬದಿ ವ್ಯಾಪಾರಿಗಳ ಸಮಸ್ಯೆ ನಿವಾರಣೆ ಜತೆಗೆ ವಿವಿಧ ಅಭಿವೃದ್ಧಿ ಆಧಾರಿತ ವಿಚಾರಗಳ ಚರ್ಚೆಗೆ ವೇದಿಕೆ ಕಲ್ಪಿಸಲಾಗಿದೆ. ಸ್ಥಳೀಯ ಅಧಿಕಾರಿಗಳು ಇಲ್ಲಿ ಲಭ್ಯವಿರುತ್ತಾರೆ. ಸೂಯೇಜ್‌ ಫಾರಂನಲ್ಲಿ ಕುಂದು ಕೊರತೆ ನಿವಾರಣಾ ಸಮಿತಿ ಕಚೇರಿ ಪ್ರಾರಂಭಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈಗ, ವ್ಯಾಪಾರಿಗಳು ಸಮಸ್ಯೆ ಬಗೆಹರಿಸಿಕೊಳ್ಳಲು ಅಲೆದಾಡುವುದು ತಪ್ಪಲಿದೆ. ಇದೇ ಮೊದಲ ಬಾರಿಗೆ ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದೇವೆ‌. ವ್ಯಾಪಾರಕ್ಕೆ ಪ್ರತ್ಯೇಕ ಸ್ಥಳ ನಿಗದಿಪಡಿಸುವುದು ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಲಿದ್ದೇವೆ’ ಎಂದು ಹೇಳಿದರು.

‘ಪ್ರತಿ ಬೀದಿ ಬದಿ ವ್ಯಾಪಾರಿಗೂ ಗುರುತಿನ ಚೀಟಿ ಕೊಡಲಾಗುವುದು. ಇದೇ ಪ್ರಥಮ ಬಾರಿಗೆ ಕಾನೂನಿನ ಚೌಕಟ್ಟಿನಲ್ಲಿ ಇಂತಹ ಉತ್ತಮ ಕೆಲಸ ಮಾಡಿರುವುದು ನಮ್ಮ ಪಾಲಿಕೆಗೆ ಹೆಮ್ಮೆಯ ಸಂಗತಿ’ ಎಂದು ಹರ್ಷ ವ್ಯಕ್ತಪಡಿಸಿದರು.

ಹೆಚ್ಚುವರಿ ಆಯುಕ್ತೆ ಕುಸುಮಾ ಕುಮಾರಿ, ವಲಯ ಅಯುಕ್ತ ಮಂಜುನಾಥ್ ರೆಡ್ಡಿ, ಪಾಲಿಕೆ ಆರೋಗ್ಯಾಧಿಕಾರಿ ಡಾ.ಎನ್.ಪಿ.ವೆಂಕಟೇಶ್, ನಿವೃತ್ತ ನ್ಯಾಯಾಧೀಶ ವಸಂತ್ ಕುಮಾರ್, ರಾಜ್ಯ ರಸ್ತೆ ಬದಿ ವ್ಯಾಪಾರಿಗಳ‌ ಮಹಾಮಂಡಳ ಅಧ್ಯಕ್ಷ ಭಾಸ್ಕರ್, ಶ್ರೀನಿವಾಸ್‌ರಾಜೇ ಅರಸ್, ಸದಸ್ಯರಾದ ಬಿ.ಎಸ್.ರವಿ.ಆರ್.ಗುರುಸ್ವಾಮಿ, ವಿ‌.ವಡಿವೇಲು, ಪ್ರಭುಸ್ವಾಮಿ, ವಿ.ವಿಶ್ವನಾಥ್ ಬಸಪ್ಪ, ನಾಗರತ್ನಮ್ಮ, ಭಾರತಿ, ಅನಿತಾ ಕುಮಾರಿ ಹಾಗೂ ಸಮಿತಿಯ ನಾಮನಿರ್ದೇಶನ ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT