ಬೆಂಗಳೂರು/ ಮೈಸೂರು: ಮೈಸೂರು ಜಿಲ್ಲೆಯ 341.44 ಚದರ ಕಿ.ಮೀ. ವ್ಯಾಪ್ತಿಯೊಳಗೆ ಬರುವ ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳನ್ನು ಮೈಸೂರು ಮಹಾನಗರ ಪಾಲಿಕೆಗೆ ಸೇರ್ಪಡೆಗೊಳಿಸಿ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಲಾಗಿದೆ.

ಅಧಿಕೃತ ಆದೇಶ ಶುಕ್ರವಾರ ಹೊರಬಿದ್ದಿದ್ದು, ಹಲವು ದಿನಗಳ ಬೇಡಿಕೆಗೆ ಸ್ಪಂದನೆ ದೊರೆತಂತಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯಪತ್ರದಿಂದ ಪ್ರಕಟವಾದ ದಿನದಿಂದಲೇ ಇದು ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

ವರ್ಷಾರಂಭದಲ್ಲೇ ಸರ್ಕಾರ ಮೈಸೂರಿನ ಜನರಿಗೆ ಸಿಹಿ ಸುದ್ದಿ ನೀಡಿದೆ. ಮೈಸೂರಿನವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮತ್ತೊಂದು ಕೊಡುಗೆ ಇದಾಗಿದೆ. ಮಹಾನಗರಪಾಲಿಕೆಯು ಈಗ ಹೊರವಲಯದ ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯನ್ನೂ ಒಳಗೊಂಡಂತಾಗಿದೆ. ಅಲ್ಲಿಗೆ ಮೂಲಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿಯನ್ನೂ ನಿರ್ವಹಿಸಲಾಗುವುದೇ ಎನ್ನುವುದು ಆ ಭಾಗದವರ ನಿರೀಕ್ಷೆಯಾಗಿದೆ.

ಇದರೊಂದಿಗೆ, 86.31 ಚದರ ಕಿ.ಮೀ.ನಷ್ಟಿರುವ ಪಾಲಿಕೆಯ ವ್ಯಾಪ್ತಿಯನ್ನು 341.44 ಚದರ ಕಿ.ಮೀ.ಗೆ ಹಿಗ್ಗಿಸಲಾಗಿದೆ. ಇದರಿಂದಾಗಿ 11.46 ಲಕ್ಷರಷ್ಟಿದ್ದ ಜನಸಂಖ್ಯೆ ಜೊತೆಗೆ ಪಾಲಿಕೆ ವ್ಯಾಪ್ತಿಗೆ ಹೆಚ್ಚುವರಿಯಾಗಿ ₹ 2.7 ಲಕ್ಷ ಜನರು ಸೇರ್ಪಡೆಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಬೃಹತ್ ಮೈಸೂರು ಮಹಾನಗರ ಪಾಲಿಕೆಗೆ ಸೇರ್ಪಡೆಗೊಂಡ ಪ್ರದೇಶಗಳು: ಮೈಸೂರು ಮಹಾನಗರಪಾಲಿಕೆ, ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಕಡಕೊಳ, ಬೋಗಾದಿ ಪಟ್ಟಣ ಪಂಚಾಯಿತಿಗಳು, ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ (ಪೂರ್ಣ), ಆಲನಹಳ್ಳಿ ಗ್ರಾಮ ಪಂಚಾಯಿತಿಯ ಆಲನಹಳ್ಳಿ ಮತ್ತು ಲಲಿತಾದ್ರಿಪುರ ಗ್ರಾಮಗಳು, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಯ ಸಿದ್ದಲಿಂಗಪುರ, ಬೆಲವತ್ತ, ಕೆಸರೆ, ಮೇಟಗಳ್ಳಿ ಗ್ರಾಮಗಳು.

ಇಲವಾಲ ಗ್ರಾಮ ಪಂಚಾಯಿತಿಯ ಇಲವಾಲ, ಕರಕನಹಳ್ಳಿ, ಮೈದನಹಳ್ಳಿ, ಮೇಗಳಾಪುರ ಗ್ರಾಮಗಳು, ಧನಗಳ್ಳಿ ಗ್ರಾಮ ಪಂಚಾಯಿತಿಯ ಧನಗಳ್ಳಿ, ಯಡಹಳ್ಳಿ, ಕೆಂಚಲಗೂಡು, ಹಾಲಾಳು,ಚೌಡಹಳ್ಳಿ (ಕೋಟೆಹುಂಡಿ) ಗ್ರಾಮಗಳು. ಮಲ್ಲಹಳ್ಳಿ (ಬೀರಿಹುಂಡಿ) ಗ್ರಾಮ ಪಂಚಾಯಿತಿಯ ಮಲ್ಲಹಳ್ಳಿ–ಬೀರಿ ಹುಂಡಿ, ಗೋಹಳ್ಳಿ, ಕುಮಾರಬೀಡು, ಬಲ್ಲಹಳ್ಳಿ ಗ್ರಾಮಗಳು, ನಾಗನಹಳ್ಳಿ ಗ್ರಾಮ ಪಂಚಾಯಿತಿಯ ಶ್ಯಾದನಹಳ್ಳಿ ಮತ್ತು ನಾಗವಾಲ ಗ್ರಾಮ ಪಂಚಾಯಿತಿಯ ನಾಗವಾಲ, ಬೊಮ್ಮನಹಳ್ಳಿ, ಹುಯಿಲಾಳು ಗ್ರಾಮಗಳು.

ಈ ಕುರಿತು ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ 30 ದಿನಗಳೊಳಗೆ ಲಿಖಿತವಾಗಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9 ನೇ ಮಹಡಿ, ವಿ.ವಿ.ಗೋಪುರ, ಬೆಂಗಳೂರು– ಈ ವಿಳಾಸಕ್ಕೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.