ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ನಗರಪಾಲಿಕೆ ಚುನಾವಣೆ ತಡ ಮಾಡುವುದಿಲ್ಲ: ಬಿ.ಎಸ್. ಸುರೇಶ್

Published 6 ನವೆಂಬರ್ 2023, 12:16 IST
Last Updated 6 ನವೆಂಬರ್ 2023, 12:16 IST
ಅಕ್ಷರ ಗಾತ್ರ

ಮೈಸೂರು: ‘ಮೈಸೂರು ಮಹಾನಗರಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಲಾಗುವುದು. ಈ ವಿಷಯದಲ್ಲಿ ತಡ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಚುನಾವಣೆ ನಡೆಸಲು ಉತ್ಸುಕರಾಗಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆಗೂ ಪಾಲಿಕೆ ಚುನಾವಣೆ ನಡೆಸುವುದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಪಾಲಿಕೆ ಚುನಾವಣೆ ಮೀಸಲಾತಿ ಬಗ್ಗೆಯೂ ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ನಮಗೆ ಚುನಾವಣೆ ಪ್ರಕ್ರಿಯೆ ನಡೆಸಲು 15 ದಿನ ಸಾಕು’ ಎಂದರು.

‘ಮೈಸೂರು–ಬೆಂಗಳೂರನ್ನು ಅವಳಿ ನಗರಗಳಾಗಿ ಪರಿಗಣಿಸಿ ಅಭಿವೃದ್ಧಿಪಡಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿಯೇ ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಬೆಂಗಳೂರಿನಿಂದಾಚೆಗಿನ ನಗರಗಳು ಬೆಳೆಯಬೇಕು ಎಂಬುದು ನಮ್ಮ ಆಶಯವಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT