ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ರೇವತಿ ರಾಜ್‌ ನಾಮಪತ್ರ ತಿರಸ್ಕೃತ– ಬಿಎಸ್‌ಪಿ ಜಿಲ್ಲಾಧ್ಯಕ್ಷ ಉಚ್ಛಾಟನೆ

Published 7 ಏಪ್ರಿಲ್ 2024, 15:10 IST
Last Updated 7 ಏಪ್ರಿಲ್ 2024, 15:10 IST
ಅಕ್ಷರ ಗಾತ್ರ

ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಾರ್ಟಿ ( ಬಿಎಸ್‌ಪಿ) ಅಭ್ಯರ್ಥಿ ರೇವತಿ ರಾಜ್‌ ಅವರ ನಾಮಪತ್ರವು ತಿರಸ್ಕೃತಗೊಂಡಿದ್ದು, ಅಫಿಡವಿಟ್‌ ಸಿದ್ಧಪಡಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

‘ರೇವತಿ ರಾಜ್‌ ಅವರ ನಾಮಪತ್ರ ಸಲ್ಲಿಕೆ ಹಾಗೂ ಚುನಾವಣಾ ಪ್ರಚಾರದ ಕಾರ್ಯವನ್ನು ಪುಟ್ಟಸ್ವಾಮಿ ಅವರಿಗೆ ಒಪ್ಪಿಸಿ ಅವರನ್ನು ತಾರಾ ಪ್ರಚಾರಕರನ್ನಾಗಿಯೂ ನೇಮಿಸಲಾಗಿತ್ತು. ಆದರೆ ಅವರು ನಾಮಪತ್ರ ಸಲ್ಲಿಕೆಗೆ ಬೇಕಾದ ದಾಖಲೆಗಳನ್ನು ಸಿದ್ಧಪಡಿಸುವ ಕಾರ್ಯದಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದು, ನಾಮಪತ್ರ ತಿರಸ್ಕೃತಗೊಳ್ಳಲು ನೇರ ಹೊಣೆಗಾರರಾಗಿದ್ದಾರೆ. ಇದರಿಂದ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಮಿತಿಯ ಸೂಚನೆಯಂತೆ ಪುಟ್ಟಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ’ ಎಂದು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಪಕ್ಷದ ಕಾರ್ಯಕರ್ತ ಚನ್ನಕೇಶವ ಮೂರ್ತಿ ಎಂಬುವರನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT