ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಲಂಚ ಪಡೆಯುವಾಗ ಎಸ್‌ಐ ರಾಧಾ ಲೋಕಾಯುಕ್ತ ಬಲೆಗೆ

Published 30 ಮೇ 2024, 7:43 IST
Last Updated 30 ಮೇ 2024, 8:01 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕುವೆಂಪುನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಧಾ ವ್ಯಕ್ತಿಯೊಬ್ಬರಿಂದ ಗುರುವಾರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಅವರು, ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನವನ್ನು ಬಿಡಿಸಿಕೊಡಲು ವ್ಯಕ್ತಿಯೊಬ್ಬರಿಂದ ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನಲ್ಲಿ ₹50 ಸಾವಿರವನ್ನು ಠಾಣೆಯಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಅವರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT