ಮೈಸೂರು: ದಸರಾ ಮಹೋತ್ಸದ ಅಂಗವಾಗಿ ಮೈಸೂರು ವಿಶ್ವವಿದ್ಯಾಲಯ ತೋಟಗಾರಿಕಾ ವಿಭಾಗವು 18ನೇ ವರ್ಷದ ದಸರಾ ಫಲಪುಷ್ಪ ಪ್ರದರ್ಶನವನ್ನು ಅ.13ರಿಂದ ಕುಕ್ಕರಹಳ್ಳಿ ಕೆರೆಯ ಪೂರ್ವ ಹಾಗೂ ಪಶ್ಚಿಮ ದಂಡೆಯಲ್ಲಿ ಏರ್ಪಡಿಸಿದೆ.
ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಉದ್ಘಾಟಿಸುವರು. ಅ.24ರವರೆಗೆ ಪ್ರದರ್ಶನ ನಡೆಯಲಿದ್ದು, ಪ್ರತಿ ದಿನವೂ ಬೆಳಿಗ್ಗೆ 9ರಿಂದ ಸಂಜೆ 7ರವರೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಇರುತ್ತದೆ ಎಂದು ತೋಟಗಾರಿಕೆ ವಿಭಾಗದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.