ಮೈಸೂರು: ಇಲ್ಲಿನ ವಿದ್ಯಾನಗರದಲ್ಲಿ ಭಾನುವಾರ ಕ್ಷುಲ್ಲಕ ಕಾರಣಕ್ಕೆ ಜಗಳಮಾಡಿ ಸ್ನೇಹಿತನನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ನಾಲ್ವರನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಘಟನೆ ಹಿನ್ನೆಲೆ: ನಗರದ ರೇಸ್ ಕೋರ್ಸ್‌ನ ಬುಕ್ಕಿಯೊಂದಿಗೆ ಕೆಲಸ ಮಾಡುತ್ತಿದ್ದ ಬಾಲರಾಜ್ ಹಾಗೂ ನಾಲ್ಕು ಮಂದಿ ಸ್ನೇಹಿತರ ನಡುವೆ ಶನಿವಾರ ರಾತ್ರಿ ಜಗಳ ಆರಂಭವಾಗಿತ್ತು. ಬಾಲರಾಜ್ ಜಗಳ ಬಿಡಿಸಲು ಬಂದಾಗ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆ.21 ರಂದು ಒಬ್ಬ ಆರೋಪಿಯನ್ನು ಮೈಸೂರಿನಲ್ಲಿ ಹಾಗೂ ಉಳಿದ ಮೂವರನ್ನು ಆ.22ರಂದು ಕನಕಪುರ ರಸ್ತೆಯ ತಲಘಟ್ಟಪುರ ಬಳಿ ನಜರಬಾದ್ ಠಾಣಾ ಪೊಲೀಸರು ವಶಕ್ಕೆ ಪಡೆದು ಬಂಧಿಸಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರುಪಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.