ಮೈಸೂರು: ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆಯ ಕೌಶಲ ತರಬೇತಿ ಕೇಂದ್ರದಲ್ಲಿ ಈಚೆಗೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಲಾಯಿತು.

ಭಾರತ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ವಜ್ರಮುನಿ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಕೇವಲ ಸಂವಿಧಾನ ಶಿಲ್ಪಿಯಲ್ಲ, ಸಮಾನತೆ ಪ್ರತಿಪಾದಿಸಿದ ಮಹಾನ್ ನಾಯಕ’ ಎಂದರು.

‘ಕೈಗಾರೀಕರಣ, ಕೃಷಿ ಸುಧಾರಣೆ, ಬಂಡವಾಳಶಾಹಿಯ ನಿಯಂತ್ರಣ ಹಾಗೂ ಕಾರ್ಮಿಕರ ಹಕ್ಕುಗಳನ್ನು ಬಲಪಡಿಸುವ ಮೂಲಕ ಭಾರತೀಯ ಆರ್ಥಿಕತೆಯನ್ನು ಪುನರ್ರಚಿಸಲು ಅಂಬೇಡ್ಕರ್ ಬಯಸಿದ್ದರು’ ಎಂದು ಹೇಳಿದರು.

ಸಮರ್ಥನಂ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜು ಮಾತನಾಡಿ, ‘ಅಂಬೇಡ್ಕರ್ ಮಹಿಳಾ ವಿಮೋಚನೆಯ ದಾರಿದೀಪವಾಗಿದ್ದು, ಮಹಿಳೆಯರ ಶೈಕ್ಷಣಿಕ, ಸಾಮಾಜಿಕ ಹಾಗೂ ಕಾನೂನು ಹಕ್ಕುಗಳಿಗಾಗಿ ಕ್ರಾಂತಿಕಾರಿ ಹೋರಾಟ ನಡೆಸಿದರು’ ಎಂದು ಸ್ಮರಿಸಿದರು.

‘ಅಸ್ಪೃಶ್ಯತೆ ಜಾತಿ ವ್ಯವಸ್ಥೆಯ ನೇರ ಫಲಿತಾಂಶವಾಗಿದ್ದು, ಜಾತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡದೆ ಅಸ್ಪೃಶ್ಯತೆ ಹೋಗಲಾಡಿಸಲು ಸಾಧ್ಯವಿಲ್ಲ ಎಂಬುದು ಅಂಬೇಡ್ಕರ್ ಅವರ ದೃಢ ನಂಬಿಕೆಯಾಗಿತ್ತು’ ಎಂದು ಸಂಸ್ಥೆಯ ಉದ್ಯೋಗಾಧಿಕಾರಿ ಆರ್.ಸುಬ್ರಮಣಿ ಹೇಳಿದರು.

ಮುಖ್ಯಶಿಕ್ಷಕಿ ಭ್ರಮಾರಂಭ, ಎನ್.ಮಾಂತೇಶ, ಪಿ.ಪದ್ಮ, ಬೃಂದಾಬಾಯಿ, ಚೈತ್ರಕುಮಾರಿ, ಸ್ಪರ್ಶ, ಲತಾ, ಎಸ್. ಪವನ್, ಎಚ್.ವಿದ್ಯಾವತಿ, ಮನು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-39-768306069

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.