ಮೈಸೂರು: ‘ಬಾಬಾಸಾಹೇಬ್ ಅಂಬೇಡ್ಕರ್ ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ. ಅವರು ದೇಶದ ಬಹುದೊಡ್ಡ ಆಸ್ತಿ ಮತ್ತು ಶಕ್ತಿ’ ಎಂದು ಮುಖಂಡ ಎಂ.ಕೆ. ಸೋಮಶೇಖರ್ ಅಭಿಪ್ರಾಯಪಟ್ಟರು.

ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ನಿವೃತ್ತ ನೌಕರರ ಬಳಗದಿಂದ ಇಲ್ಲಿನ ಕುವೆಂಪುನಗರದ ಕಾಂಪ್ಲೆಕ್ಸ್ ಆವರಣದಲ್ಲಿ ಈಚೆಗೆ ನಡೆದ ಬಿ.ಆರ್ ಅಂಬೇಡ್ಕರ್ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

ನ್ಯಾಯಾಧೀಶರಾಗಿ ನೇಮಕವಾಗಿರುವ ತಿ.ನರಸೀಪುರ ತಾಲ್ಲೂಕಿನ ಚಿಕ್ಕಬಾಗಿಲು ಗ್ರಾಮದ ನಿತ್ಯ ಎನ್. ಗುಜ್ಜಾರ್ ಹಾಗೂ ಲೋಕೋಪಯೋಗಿ ಇಲಾಖೆ ನಿವೃತ್ತ ಎಂಜಿನಿಯರ್ ಬೋರಯ್ಯ, ನಿವೃತ್ತ ಪತ್ರಾಂಕಿತ ಖಜಾನೆ ಅಧಿಕಾರಿ ವೆಂಕಟರಾಮು ಅವರನ್ನು ಸನ್ಮಾನಿಸಲಾಯಿತು.

ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು. ಪ್ರೊ.ಡಿ.ಆನಂದ್, ಬಳಗದ ಉಪಾಧ್ಯಕ್ಷ ಪಿ.ಮರಿಸ್ವಾಮಿ, ದೊಡ್ಡಸ್ವಾಮಿ, ವೆಂಕಟರಮಣ, ಶಾಂತರಾಜು, ಕೃಷ್ಣಮೂರ್ತಿ, ಶಂಕರ್, ಶಿವಣ್ಣ, ಚಿಕ್ಕ ಸಿದ್ದಯ್ಯ, ಯಲಕವಯ್ಯ, ಶ್ರೀನಿವಾಸ್, ಯುವ ಮುಖಂಡರಾದ ರಾಮನ್ ಕೆ. (ರಾಮು), ಲಿಂಗರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-39-1716826281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.