ಮೈಸೂರು: ‘ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷದ ಕಾರಣದಿಂದ ಎದುರಾಗಿರುವ ಅನಿಲ ಅಭಾವದಿಂದ ರಾಜ್ಯದಲ್ಲಿ ಆಟೊರಿಕ್ಷಾ ಚಾಲಕರು ಸಂಕಷ್ಟಕ್ಕೆ ಒಳಳಗಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಇವರ ನೆರವಿಗೆ ಬರಬೇಕು’ ಎಂದು ಪ್ರಬುದ್ಧ ಭಾರತ ಭೀಮ್ ಸೇನೆ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಗ್ಯಾಸ್ ಅಭಾವದಿಂದ ಆಟೊರಿಕ್ಷಾಗಳನ್ನು ರಸ್ತೆಗಿಳಿಸಲು ಸಾಧ್ಯವಾಗದೇ ಚಾಲಕರು ಕಂಗಾಲಾಗಿದ್ದಾರೆ. ಮಕ್ಕಳ ಶಾಲಾ, ಕಾಲೇಜು ಶುಲ್ಕ, ಫೈನಾನ್ಸ್ ಕಂಪನಿಗಳ ಸಾಲದ ಕಂತು, ದಿನನಿತ್ಯದ ಅಗತ್ಯ ವಸ್ತು ಖರೀದಿ ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಅವರ ಖಾತೆಗೆ ₹10 ಸಾವಿರ ಜಮಾ ಮಾಡಿ, ಪಡಿತರ ಕಿಟ್ ಒದಗಿಸಬೇಕು’ ಎಂದು ಕೋರಿದರು.

ಸಂಘಟನೆಯ ಪ್ರಮುಖರಾದ ಮಹದೇವಸ್ವಾಮಿ, ಜೈಪ್ರಕಾಶ್, ರಂಗಣ್ಣ ಹಾಗೂ ರಾಮು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-38-163472981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.