ಮೈಸೂರು: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಂ ಅವರ ಜಯಂತಿಯನ್ನು ಭಾನುವಾರ ಸಡಗರದಿಂದ ನಡೆಯಿತು. ಜಾನಪದ ಕಲಾತಂಡಗಳ ಮೆರವಣಿಗೆಯ ಸಂಭ್ರಮದ ಜೊತೆಗೆ, ‘ಒಳಮೀಸಲಾತಿ’ ಜಾರಿಗೆ ಆಗ್ರಹಿಸಿ ಎಡಗೈ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿದವು.

ಇಲ್ಲಿನ ರೈಲು ನಿಲ್ದಾಣದ ಎದುರಿನ ಬಾಬೂಜಿ ಪ್ರತಿಮೆಗೆ ಶಾಸಕ ಜಿ.ಟಿ.ದೇವೇಗೌಡ ಪುಷ್ಪಾರ್ಚನೆ ಮಾಡಿದರು. ವಿಧಾನಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ ಜೊತೆಯಾದರು.

ನಂತರ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯು ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಕೆ.ಹರೀಶ್ ಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ಹಸಿರು ಕ್ರಾಂತಿಯ ಮೂಲಕ ದೇಶಕ್ಕೆ ಆಹಾರ ಭದ್ರತೆ ಒದಗಿಸಿದ್ದ, ದೂರದೃಷ್ಟಿಯ ಉಪಪ್ರಧಾನಿಯಾಗಿ ಬಾಬೂಜಿ ದೇಶಕ್ಕೆ ಸೇವೆ ಸಲ್ಲಿಸಿದರು. ಶೋಷಿತರ ಏಳಿಗೆಗೆ ಶ್ರಮಿಸಿದ ಅವರ ಆದರ್ಶವನ್ನು ಎಲ್ಲರೂ ಪಾಲಿಸಬೇಕು. ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗಗಳ ಹಿತವನ್ನು ಕಾಪಾಡಿದರು. 1971ರ ಭಾರತ– ಪಾಕಿಸ್ತಾನ ಯುದ್ಧದಲ್ಲಿ ದೇಶ ಜಯಗಳಿಸಲು ಹಾಗೂ ಬಾಂಗ್ಲಾದೇಶದ ವಿಮೋಚನೆಯಲ್ಲೂ ರಕ್ಷಣಾ ಸಚಿವರಾಗಿ ಅಪೂರ್ವ ಕಾಣಿಕೆ ನೀಡಿದರು’ ಎಂದು ಸ್ಮರಿಸಿದರು.

‘ಶೋಷಿತರು ಹಾಗೂ ದಲಿತ ಸಮುದಾಯದವರ ಏಳಿಗೆಗೆ ಬಾಬೂಜಿ ಜಾರಿಗೊಳಿಸಿದ ಯೋಜನೆಗಳು ಈಗಲೂ ಪ್ರಸ್ತುತವಾಗಿವೆ. ಬಡವರು, ಹಿಂದುಳಿದ ವರ್ಗಗಳ ಜನರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಜಗಜೀವನ್ರಾಂ ಅವರ ಕನಸನ್ನು ನನಸು ಮಾಡಬೇಕು’ ಎಂದರು.

ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ‘ಮಹಾತ್ಮ ಗಾಂಧೀಜಿ, ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬೂಜಿ ಅವರ ತತ್ವಗಳನ್ನು ಪಾಲಿಸಬೇಕು. ಅನ್ಯಾಯ ಕಂಡಾಗ ಪ್ರತಿಭಟನೆಯ ಮಾರ್ಗಗಳನ್ನು ತೋರಿಕೊಟ್ಟವರು ಅವರು. ಅಂತರ್ಜಾತಿ ವಿವಾಹಗಳಾಗಿ ಮರ್ಯಾದೆಗೇಡು ಹತ್ಯೆ ವಿರುದ್ಧ ಬಾಬೂಜಿ ಹೋರಾಟ ನಡೆಸಿದರು. ದೇಶದಾದ್ಯಂತ ಅಂಚೆ ಕಚೇರಿಗಳನ್ನು ವಿಸ್ತರಿಸಿದರು. ರೈಲ್ವೆ ಸಚಿವರಾಗಿದ್ದಾಗ ಲಕ್ಷಾಂತರ ಮಂದಿಗೆ ಕೆಲಸ ನೀಡಿದರು’ ಎಂದು ಸ್ಮರಿಸಿದರು.

ಇದಕ್ಕೂ ಮುನ್ನ, ರೈಲು ನಿಲ್ದಾಣದ ವೃತ್ತದಿಂದ ಆರಂಭವಾದ ಮೆರವಣಿಗೆಯು ಜೆಎಲ್ಬಿ ರಸ್ತೆ, ಮೆಟ್ರೋಪೊಲ್ ವೃತ್ತ, ಹುಣಸೂರು ರಸ್ತೆ ಮೂಲಕ ಕಲಾಮಂದಿರದವರೆಗೆಸಾಗಿತು. ವಿವಿಧ ಜಾನಪದ ಕಲಾ ತಂಡಗಳು, ಕಾಲೇಜು ವಿದ್ಯಾರ್ಥಿಗಳು ಹೆಜ್ಜೆಹಾಕಿದರು.

ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿಸಿಪಿ ಸುಂದರ್ರಾಜ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ,ಸಹಾಯಕ ನಿರ್ದೇಶಕ ಎ.ಎನ್.ಜನಾರ್ಧನ್, ಮೈಸೂರು ವಿ.ವಿ. ಕುಲಪತಿ ಪ್ರೊ.ಎನ್.ಕೆ.ಲೋಕನಾಥ, ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-39-2052774618

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.