ಮೈಸೂರು: ರಾಜ್ಯ ಸರ್ಕಾರದಿಂದ ನೀಡಲಾದ ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಭಾಜನವಾದ ಮಾಜಿ ಮೇಯರ್, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ ಅವರು ಅಭಿನಂದನೆಗಳ ಮಹಾಪೂರದಲ್ಲಿ ಮಿಂದರು.

ಇಲ್ಲಿನ ಪುರಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿಪೌರಕಾರ್ಮಿಕರು ಸೇರಿದಂತೆ ಮುಖಂಡರು, ಸಂಘ–ಸಂಸ್ಥೆಗಳ ಮುಖಂಡರು, ರಾಜಕೀಯ ನಾಯಕರು ಅಭಿನಂದಿಸಿದರು.

ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ ಪೌರಕಾರ್ಮಿಕರ ಮಹಾಸಂಘ, ಮಹಾನಗರಪಾಲಿಕೆ ಕಾಯಂ ಹಾಗೂ ಗುತ್ತಿಗೆ ಪೌರಕಾರ್ಮಿಕರ ಸಂಘ, ಮಹಾನಗರಪಾಲಿಕೆ ಒಳಚರಂಡಿ (ಸಹಾಯಕರು) ಹಾಗೂ ಕಾರ್ಮಿಕರ ಸಂಘ, ಪಾಲಿಕೆಯ ಸ್ವಚ್ಛತಾ ವಾಹನ ಚಾಲಕರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಅವರು ಪೌರಕಾರ್ಮಿಕರ ಹಿತರಕ್ಷಣೆಗಾಗಿ ನಡೆಸಿದ ಹೋರಾಟವನ್ನು ಶ್ಲಾಘಿಸಲಾಯಿತು.

ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತು, ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಹರೀಶ್ ಕುಮಾರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ.ವಿಜಯ್ಕುಮಾರ್, ನಗರ ಜಿಲ್ಲಾ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ಸದಸ್ಯ ಎಚ್.ವಿ. ರಾಜೀವ್, ಮುಖಂಡರಾದ ಅಹಿಂದ ಜವರಪ್ಪ, ಶಿವಣ್ಣ, ಶಿವಪ್ರಸಾದ್, ಆರ್.ಸಿ. ಮಹೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-39-1103844838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.