ಕೆ.ಆರ್.ನಗರ: ಮಹಿಳಾ ಸ್ವಸಹಾಯ ಸಂಘಗಳಿಗೆ ಜಿಲ್ಲಾ ಬ್ಯಾಂಕ್ಗಳಿಂದ ಸಾಲಸೌಲಭ್ಯ ವಿತರಿಸಲಾಗುತ್ತಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ ಹೇಳಿದರು.

ತಾಲ್ಲೂಕಿನ ಗಳಿಗೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಗುರುವಾರ ನಡೆದ ಸಾಲದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

14 ಮಹಿಳಾ ಸ್ವಸಹಾಯ ಸಂಘಗಳಿಗಾಗಿ ₹1.44 ಕೋಟಿ ಬಿಡುಗಡೆಯಾಗಿದ್ದು, ಸಂಘಕ್ಕೆ ತಲಾ ₹10 ಲಕ್ಷ ಸಾಲ ವಿತರಿಸಲಾಗುತ್ತದೆ, ಈ ಸಾಲದ ಹಣವನ್ನು ಹೈನುಗಾರಿಕೆ ಸೇರಿದಂತೆ ಇನ್ನಿತರೆ ವ್ಯವಹಾರಗಳಿಗೆ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಕರೆ ನೀಡಿದರು.

ವಾರ್ಷಿಕ ಕಡಿಮೆ ಬಡ್ಡಿದರದಲ್ಲಿ ಚಿನ್ನಾಭರಣ, ವಾಹನ, ಕೃಷಿಪರಿಕರಗಳ ಖರೀದಿಗಾಗಿ ಸಾಲ ನೀಡಲಾಗುತ್ತಿದ್ದು, ಈ ಬಾರಿಯಿಂದ ಹೊಸ ರೈತ ಸದಸ್ಯರಿಗೂ ಕೆಸಿಸಿ ಸಾಲ ನೀಡಲಾಗುತ್ತಿದೆ, ರೈತರು ಸದುಪಯೋಗಪಡಿಸಿಕೊಳ್ಳಬೇಕು, ಪಡೆದ ಸಾಲ ಸಕಾಲದಲ್ಲಿ ಮರುಪಾವತಿ ಮಾಡಬೇಕು ಎಂದರು.

ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕಿನ 24 ಸಂಘಗಳ ಪೈಕಿ 4 ಸಂಘಗಳು ಸುಸ್ತಿಯಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಜಿಲ್ಲಾ ಬ್ಯಾಂಕ್ ಪ್ರತಿನಿಧಿಗಳಿಗೆ, ಸಂಘದ ಸಿಇಒ ಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸಂಘದ ಉಪಾಧ್ಯಕ್ಷ ಕುಮಾರ್, ನಿರ್ದೇಶಕರಾದ ಎಂ.ಎಸ್.ಮಹದೇವ್, ರಾಮಕೃಷ್ಣೇಗೌಡ, ಜಾಣೇಗೌಡ, ಮಧುಕಿರಣ್, ರಾಜೇಗೌಡ, ರೇವಣ್ಣ, ರಾಜೇಶ್ವರಿ, ವೇದಾವತಿ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಟಿ.ಉಮೇಶ್, ಹಂಪಾಪುರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಪಿ.ಪ್ರಶಾಂತ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಮೋಹನರಾಜ್, ಸಂಘದ ಸಿಇಒ ಪುಟ್ಟೇಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-38-546393699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.