ಮೈಸೂರು: ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಲಿಂಗಾಯತ ಸಂಘ, ಸಂಸ್ಥೆಗಳ ಆಶ್ರಯದಲ್ಲಿ ಏ.19, 20ರಂದು ನಗರದ ಕಲಾಮಂದಿರದಲ್ಲಿ ‘ನಮ್ಮ ಬಸವಣ್ಣ ಸಾಂಸ್ಕೃತಿಕ ನಾಯಕ’ ಶೀರ್ಷಿಕೆಯಡಿಯಲ್ಲಿ ‘ಬಸವ ಜಯಂತಿ’ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿ ಅಧ್ಯಕ್ಷ ಎಂ. ಚಂದ್ರಶೇಖರ್ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘19ರಂದು ಬೆಳಿಗ್ಗೆ 8.30ಕ್ಕೆ ಶಿವರಾತ್ರಿ ರಾಜೇಂದ್ರ ವೃತ್ತದಿಂದ ಮೆರವಣಿಗೆ ನಡೆಯಲಿದೆ. ಮೆರವಣಿಗೆಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ ನೀಡುವರು. ಸಚಿವ ಎಂ.ಬಿ.ಪಾಟೀಲ್ ಪುಷ್ಪನಮನ ಸಲ್ಲಿಸುವರು. ಹೊಸಮಠದ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಸದ ಯದುವೀರ್ ಒಡೆಯರ್, ನೈಸ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಭಾಗವಹಿಸುವರು’ ಎಂದರು.

20ರಂದು ಬೆಳಿಗ್ಗೆ 9.30ಕ್ಕೆ ನೂತನ ಡಿಸಿ ಕಚೇರಿ ಎದುರಿನ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸುವರು. 10.30ಕ್ಕೆ ಕಲಾಮಂದಿರದಲ್ಲಿಬಸವ ಜಯಂತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಡಿ.ಕೆ.ಶಿವಕುಮಾರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು ಎಂದು ತಿಳಿಸಿದರು.

ಜಿ.ಎಂ.ಜೈಶಂಕರ್ ಜೀಮಾರಹಳ್ಳಿ, ಕೆ.ವಿ.ಮಲ್ಲೇಶ್, ಹರೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-39-1168101928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.