ಮೈಸೂರು: ಇಲ್ಲಿನ ಮೈಸೂರು ಶರಣ ಮಂಡಳಿಯು ನಟರಾಜ ಪ್ರತಿಷ್ಠಾನದ ಸಹಯೋಗದಲ್ಲಿ ನಗರದ ಖಿಲ್ಲೆ ಮೊಹಲ್ಲಾದ ಹೊಸಮಠದ ನಟರಾಜ ಸಭಾಭವನದಲ್ಲಿ ಮೇ 23ರಂದು ಬೆಳಿಗ್ಗೆ 10.30ಕ್ಕೆ ಬಸವ ಜಯಂತಿ ಆಚರಣೆ ಹಾಗೂ ‘ಬಸವ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ.

ವಾಟಾಳು ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸುವರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಹೆಳವರಹುಂಡಿ ಸಿದ್ದಪ್ಪ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ವಿವಿಧ ಕ್ಷೇತ್ರದ ಸಾಧಕರಾದ ಎಚ್.ಎನ್. ಪ್ರೇಮ್ಕುಮಾರ್ (ಸಮಾಜಸೇವೆ), ಡಿ.ವಿ. ಪರಶಿವಮೂರ್ತಿ (ಕುಲಪತಿ), ಕೆ.ಎಸ್. ಸುಂದರರಾಜ್ (ಡಿಸಿಪಿ), ಎನ್. ಸರ್ದಾರ್ ಸಚ್ಚಿದಾನಂದಮೂರ್ತಿ (ಡಿಎವಿ ಶಾಲೆ), ಸುಧಾ ಮೃತ್ಯುಂಜಯಪ್ಪ (ಸಮಾಜಸೇವೆ) ಹಾಗೂ ಪ್ರೊ.ಮುರಳಿ (ಎಂಐಟಿ ವಿದ್ಯಾಸಂಸ್ಥೆ) ಅವರಿಗೆ ‘ಬಸವ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಮೈಸೂರು ಶರಣ ಮಂಡಳಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-39-1330674260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.