ಮೈಸೂರು: ‘ಜಿಲ್ಲಾ ಭಗೀರಥ ಜಯಂತ್ಯುತ್ಸವ ಸಮಿತಿಯು ಜಿಲ್ಲಾಡಳಿತದ ಸಹಯೋಗದಲ್ಲಿ ಏ.23ರಂದು ನಗರದಲ್ಲಿ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದು ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಹೇಳಿದರು.

‘ಅಂದು ಬೆಳಿಗ್ಗೆ 9.30 ಕೋಟೆ ಆಂಜನೇಯಸ್ವಾಮಿ ದೇಗುಲದ ಆವರಣದಿಂದ ಮೆರವಣಿಗೆ ಆರಂಭ ಆಗಲಿದೆ. ಉಪ್ಪಾರ ಸಮಾಜದ ಮೂಲ ಕಸುಬಾದ ಉಪ್ಪು ತಯಾರಿಕೆಯನ್ನು ಬಿಂಬಿಸುವ ಉಪ್ಪಿನ ರಾಶಿ ಮತ್ತು ಗಂಗಾ ಕಳಸ ಪೂಜೆಯನ್ನು ಮಾಡಿ ಪುಷ್ಪಾರ್ಚನೆಯೊಂದಿಗೆ ಭಗೀರಥ ಮಹರ್ಷಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಕಲಾತಂಡಗಳು ಪಾಲ್ಗೊಳ್ಳಲಿವೆ’ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮಧ್ಯಾಹ್ನ 12ಕ್ಕೆ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಹೊಸದುರ್ಗದ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಮಳವಳ್ಳಿಯ ಅಯ್ಯನ ಸರಗೂರು ಮಠದ ಮಹದೇವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜನಪ್ರತಿನಿಧಿಗಳು ಹಾಗೂ ಸಮುದಾಯದ ಮುಖಂಡರು ಪಾಲ್ಗೊಳ್ಳಲಿದ್ದಾರೆ’ ಎಂದರು.

ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ಅಧ್ಯಕ್ಷ ಎಂ.ರಾಮಚಂದ್ರು, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಕರಳಾಪುರ ನಾಗರಾಜು, ಜಯಂತ್ಯುತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಕನಕನಗರ ಮಹದೇವ್, ಆರ್ಥಿಕ ಸಮಿತಿ ಅಧ್ಯಕ್ಷ ಎಂ. ಗೋವಿಂದರಾಜು, ಆಹಾರ ಸಮಿತಿ ಅಧ್ಯಕ್ಷ ಟಿ.ಆರ್. ಶಿವರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-39-1401305884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.