ಮೈಸೂರು: ಇಲ್ಲಿನ ಗಾಂಧಿನಗರ ಡಾ.ಬಿ.ಆರ್.ಅಂಬೇಡ್ಕರ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಅಂಬೇಡ್ಕರ್ ಜಯಂತಿ ಅಂಗವಾಗಿ ಏ.14ರಂದು ‘ಭೀಮೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಶರತ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ರಾತ್ರಿ 7ಕ್ಕೆ ಅಂಬೇಡ್ಕರ್ ಜೀವನ ಚರಿತ್ರೆ ಸಾರುವ ಆಕರ್ಷಕ ಸ್ತಬ್ಧಚಿತ್ರ ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡ ಒಳಗೊಂಡ ಅದ್ದೂರಿ ಮೆರವಣಿಗೆ ನಡೆಯಲಿದೆ’ ಎಂದರು.

ಬಡಾವಣೆಯ ಅಂಬೇಡ್ಕರ್ ವೃತ್ತದಿಂದ ಈ ಮೆರವಣಿಗೆ ಹೊರಡಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಯದುವೀರ್ ಒಡೆಯರ್, ಶಾಸಕ ಹರೀಶ್ಗೌಡ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಹಾಜರಿರುವರು ಎಂದು ತಿಳಿಸಿದರು.

ಅಂದು ಬೆಳಿಗ್ಗೆ 10ಕ್ಕೆ ಗಾಂಧಿನಗರದ ಮನೆಮಂಚಮ್ಮ ದೇವಾಲಯದಲ್ಲಿ ರಕ್ತದಾನ ಶಿಬಿರ ಇರಲಿದೆ. ಸಾನ್ನಿಧ್ಯವನ್ನು ಜ್ಞಾನಪ್ರಕಾಶ ಸ್ವಾಮೀಜಿ ವಹಿಸುವರು. ಸಂಜೆ 5ಕ್ಕೆ ಬೈಕ್ ರ್ಯಾಲಿ ಆಯೋಜಿಸಲಾಗಿದ್ದು, ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸುವರು ಎಂದರು.

12ರಂದು ಆಕರ್ಷಕ ದೀಪಾಲಂಕಾರ, ಲೇಸರ್ ಶೋ, 13ರಂದು ಸಂಜೆ 6ಗಂಟೆಗೆ ಗಾಂಧಿನಗರದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ‘ಬಡಾವಣೆಗೆ ಸೀಮಿತವಾಗಿದ್ದ ಅಂಬೇಡ್ಕರ್ ಜಯಂತಿಯನ್ನು ಇಂದು ಎಲ್ಲೆಡೆ ಆಚರಿಸಲಾಗುತ್ತಿದೆ. ಅಂಬೇಡ್ಕರ್ ವಿಶ್ವವ್ಯಾಪಿ. ದಲಿತರ ಎದೆಗಳಲ್ಲಿ ಅಂಬೇಡ್ಕರ್ ವಿಚಾರಧಾರೆ ಬಿತ್ತಬೇಕಿದೆ’ ಎಂದರು.

ಆರ್.ಸಿದ್ದಪ್ಪ, ರಮೇಶ್, ಚರಣ್, ಶಿವಣ್ಣ, ಪುಟ್ಟರಂಗಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-39-1984628933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.