ಮೈಸೂರು: ‘ಭೋವಿ ಜನಾಂಗದ ಮಹಿಳೆಯರನ್ನು ಒಗ್ಗೂಡಿಸಿ ಸಂಘ ರಚಿಸಿ, ಅವರಿಗೆ ಸರ್ಕಾರದ ಸಾಲ ಯೋಜನೆಗಳನ್ನು ಒದಗಿಸಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡಬಹುದು’ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೈಕ್ರೋ ಕ್ರೆಡಿಟ್ ಯೋಜನೆಯಡಿ ಭೋವಿ ಜನಾಂಗದ ಕನಿಷ್ಠ 10 ಮಹಿಳಾ ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ಉತ್ಪಾದನಾ ಚಟುವಟಿಕೆಗೆ ₹2.50 ಲಕ್ಷ ಸಹಾಯಧನ ಮತ್ತು ₹2.50 ಲಕ್ಷ ಸಾಲ ಸಿಗಲಿದೆ. ಹೆಣ್ಣು ಮಕ್ಕಳು ಈ ಯೋಜನೆ ಪಡೆಯಲು ಮುಂದೆ ಬರಬೇಕು. ಅಧಿಕಾರಿಗಳು ಮಾಹಿತಿ ನೀಡಿ ಪ್ರೇರೇಪಿಸಬೇಕು’ ಎಂದರು.

‘ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ಬ್ಯಾಂಕಿನವರು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ನೀಡಿದರೆ, ಸಾಲ ನೀಡಲು ಬ್ಯಾಂಕ್ ನಿರಾಕರಿಸಿದರೆ, ನಿರಾಕರಿಸಿದಕ್ಕೆ ನಿಖರ ಮಾಹಿತಿ ದೊರಕುತ್ತದೆ’ ಎಂದರು.

‘ಭೋವಿ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ. ದಾಖಲಾತಿ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟಲ್ ವ್ಯವಸ್ಥೆ ಸಿಗಲಿದೆ. ಕಾಲೇಜು, ಶಾಲೆಗಳಿಗೆ ದಾಖಲಾತಿ ಪ್ರಾರಂಭವಾಗಿದ್ದು, ಜಾತಿ ಪ್ರಮಾಣಪತ್ರವನ್ನು ವಿಳಂವಾಗದಂತೆ ಒದಗಿಸಿ’ ಎಂದು ಸೂಚಿಸಿದರು.

‘ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಆಯ್ಕೆ ಮಾಡಲಾಗುವುದು. ಎಲ್ಲ ವಿಧಾನಸಭಾ ಕ್ಷೇತ್ರದಲ್ಲೂ ಶೇ 100ರಷ್ಟು ಸಾಧನೆ ಮಾಡಬೇಕು. ಜನಾಂಗದ ಮುಖಂಡರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಹೆಚ್ಚು ಜನರು ಅರ್ಜಿ ಸಲ್ಲಿಸುವಂತೆ ನೋಡಿಕೊಳ್ಳಿ’ ಎಂದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರನಾಯಕ್, ‘ನಿಗಮದಿಂದ ಸೌಲಭ್ಯ ಪಡೆಯಲು ಭೋವಿ, ಒಡ್, ಒಡ್ಡೆ, ಒಡ್ಡರ್, ವಡ್ಡರ್, ವಡ್ಡರ, ಕಲ್ಲು ಒಡ್ಡರ, ಗೋವಿ (ನಾನ್ ಗೋಸ್ಟ್), ಮಣ್ಣು ವಡ್ಡರ ಸೇರಿದಂತೆ 9 ಜಾತಿಗಳಿಗೆ ಸೇರಿದ ವ್ಯಕ್ತಿಗಳಾಗಿರಬೇಕು. ವಿವಿಧ ರೀತಿಯ ಸಾಲ ಸೌಲಭ್ಯ ಒದಗಿಸಿ ಅವರ ಆರ್ಥಿಕ ಮಟ್ಟ ಸುಧಾರಿಸುವುದು ನಿಗಮದ ಉದ್ದೇಶವಾಗಿದೆ. ಇದಲ್ಲದೇ ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಯ ಎಸ್.ಸಿ.ಎಸ್.ಪಿ ಯೋಜನೆಯಡಿ ರೂಪಿಸಿರುವ ಸೌಲಭ್ಯಗಳನ್ನು ಸಹ ಪಡೆಯಬಹುದು’ ಎಂದರು.

ನಿಗಮದಿಂದ ನೀಡಲಾಗುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಕುರಿ, ಮೇಕೆ ಸಾಕಾಣಿಕೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯ ಉಪಯುಕ್ತತೆಯ ಬಗ್ಗೆ ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ‘ಈವರೆಗೆ ಬ್ಯಾಂಕಿನಿಂದ ಸಾಲ ಪಡೆಯದೇ ಇರುವ ಫಲಾನುಭವಿಗಳ ಸಿಬಿಲ್ ಸ್ಕೋರ್ ಶೂನ್ಯ ಇರುತ್ತದೆ. ಇದು ಸಾಲ ಪಡೆಯಲು ಸಮಸ್ಯೆಯಾಗುವುದಿಲ್ಲ. ಭೋವಿ ನಿಗಮದವರು ಯೋಜನೆವಾರು ನೋಡಲ್ ಅಧಿಕಾರಿ ನೇಮಕ ಮಾಡಿ ಫಲಾನುಭವಿಗಳು ಹಾಗೂ ಬ್ಯಾಂಕ್ನೊಂದಿಗೆ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಬ್ಯಾಂಕ್ನಿಂದ ಸಾಲ ನೀಡಲು ನಿರಾಕರಣೆಯಾದರೆ ನಿಖರವಾದ ಕಾರಣ ಸಿಗುತ್ತದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯಾ, ಉಪ ಪೊಲೀಸ್ ಆಯುಕ್ತೆ ಹರ್ಷ ಪ್ರಿಯಂವದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಸೆಸ್ಕ್ ಮುಖ್ಯ ಎಂಜಿನಿಯರ್ ಸುನೀಲ್, ಭೋವಿ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-39-1817195838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.