ಮೈಸೂರು: ‘ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕುರಿತು ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ನೀಡಿರುವ ಹೇಳಿಕೆ ಖಂಡನೀಯ. ಅವರನ್ನು ಟೀಕಿಸುವ ನೈತಿಕತೆ ಕಾಂಗ್ರೆಸ್ ಮುಖಂಡರಿಗೆ ಇಲ್ಲ’ ಎಂದು ಬಿಜೆಪಿ ಮುಖಂಡ ವಿ.ಶೈಲೇಂದ್ರ ಟೀಕಿಸಿದರು.

‘ಛಲವಾದಿ ನಾರಾಯಣಸ್ವಾಮಿ ದಲಿತರು. ಛಲವಾದಿ ಮಹಾಸಭಾ ಒಳ ಮೀಸಲಾತಿ ಹೋರಾಟದಲ್ಲಿ ಸಮಾಜದ ಹಿತದೃಷ್ಟಿಯಿಂದ ಅವರು ಪಾಲ್ಗೊಂಡಿದ್ದರು. ಆದರೆ, ಇದು ಕಾಂಗ್ರೆಸ್ ಸರ್ಕಾರದ ಪರ ಮಾಡಿದ ಪ್ರತಿಭಟನೆ ಎಂಬುದು ತಿಳಿದ ಬಳಿಕ ಅಲ್ಲಿಂದ ನಿರ್ಗಮಿಸಿದ್ದಾರೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಬಿಜೆಪಿ ನಾಯಕರ ವಿನಾಕಾರಣ ಟೀಕೆ, ಜಾತಿ ನಿಂದನೆ ಮುಂದುವರಿಸಿದರೆ ಅಂಥವರ ಮನೆ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು.

ಮುಖಂಡರಾದ ರಾಕೇಶ್, ಪ್ರತಾಪ್, ಮಹೇಶ್, ಕೆ.ಮಹದೇವ, ಗೌತಮ್ ವಿಶ್ವಕರ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-39-1823509656

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.