ಮೈಸೂರು: ಬೋಗಾದಿ ಸಂಪರ್ಕಿಸುವ ವರ್ತುಲ ರಸ್ತೆಯ ಜಂಕ್ಷನ್ನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

‘ಶನಿವಾರ ಮಧ್ಯಾಹ್ನ ಸರ್ವೀಸ್ ರಸ್ತೆಯಿಂದ ಹಿನಕಲ್ ಕಡೆ ಬೈಕ್ ಸವಾರ ತೆರಳುತ್ತಿದ್ದು, ಎದುರಿಗೆ ಬರುತ್ತಿದ್ದ ಟಿಪ್ಪರ್ಗೆ ಬೈಕ್ನ ಹ್ಯಾಂಡಲ್ ತಗುಲಿದೆ. ಸವಾರ ಬಲ ಭಾಗಕ್ಕೆ ಬಿದ್ದಿದ್ದು, ಆತನ ತಲೆಯ ಮೇಲೆ ಟಿಪ್ಪರ್ನ ಹಿಂಬದಿ ಚಕ್ರ ಹರಿದಿದ್ದರಿಂದ ಸ್ಥಳದಲ್ಲೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಕೆ.ಆರ್. ಸಂಚಾರ ಠಾಣೆ ಇನ್ಸ್ಪೆಕ್ಟರ್ ಪಿ.ಮಹದೇವ ಸ್ವಾಮಿ, ಎಸ್ಐಗಳಾದ ಗಣೇಶ್, ಅಶ್ವನಿ, ಸಿಬ್ಬಂದಿ ಮಹೇಶ್, ಜವರೇಗೌಡ, ಮನೋರಂಜನ್ ಭೇಟಿ ನೀಡಿ ಪರಿಶೀಲಿಸಿದರು.

ಸವಾರ ಬಾರ್ವೊಂದರಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು, ಹೆಸರು ಸೇರಿದಂತೆ ವಿಳಾಸ ಪತ್ತೆಗೆ ಕ್ರಮ ವಹಿಸಿದ್ದಾರೆ. ಕೆ.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-39-655291378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.