ಮೈಸೂರು: ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಇತರೆ ಉದ್ದೇಶಗಳಿಗೆ ಕೊಳವೆ ಬಾವಿ ಕೊರೆಸುವವರು ಸ್ಥಳೀಯ ಪ್ರಾಧಿಕಾರಳಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 13ನೇ ಜಿಲ್ಲಾ ಅಂತರ್ಜಲ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಳವೆಬಾವಿ ಕೊರೆಸುವವರು ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರಗಳಿಂದ ಕಡ್ಡಾಯವಾಗಿ ‘ಸಾರ್ವಜನಿಕ ಕುಡಿಯುವ ನೀರಿನ ಮೂಲಗಳು ಅಂತರತೆಯ ಬಗ್ಗೆ ದೃಢೀಕರಣ ಪತ್ರ ಪಡೆದು ನಂತರ ಕೊಳವೆಬಾವಿ ಸ್ಥಳಾಯ್ಕೆಗಾಗಿ ಸೇವಾ ಸಿಂಧು ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದರು.

ಕೈಗಾರಿಕೆ, ವಾಣಿಜ್ಯ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ ಮನೋರಂಜನೆ ಘಟಕಗಳು ಅಂತರ್ಜಲವನ್ನು ಬಳಸಲು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ (ಎನ್ಒಸಿ) ಪಡೆಯುವುದು ಕಡ್ಡಾಯವಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ತಪ್ಪಿದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದಂಡದ ಮೊತ್ತ ಏರಿಕೆ: ‘ಅನಧಿಕೃತವಾಗಿ ಕೊಳವೆಬಾವಿ ಕೊರೆಯುವ ರಿಂಗ್ ಯಂತ್ರಗಳಿಗೆ ವಿಧಿಸಲಾಗುವ ದಂಡದ ಮೊತ್ತವನ್ನು ಹೆಚ್ಚಿಸಿದ್ದು, ₹25 ಸಾವಿರದವರೆಗೆ ದಂಡ ವಿಧಿಸಲಾಗುವುದು. ಕೊರೆ ಬಾವಿ ಅಥವಾ ಕೊಳವೆ ಬಾವಿ ಕೊರೆಸುವುದನ್ನು ಪೂರ್ಣಗೊಳಿಸಿದ ನಂತರ ಮಾರಣಾಂತಿಕ ಆಕಸ್ಮಿಕಗಳನ್ನು ತಡೆಯಲು ಸುರಕ್ಷತಾ ಕ್ರಮವಹಿಸಿ, ಕೊಳವೆಬಾವಿ ಮುಚ್ಚಬೇಕು. ಅಪೂರ್ಣವಾಗಿ ಕೊರೆಸಲಾದ ಕೊರೆಬಾವಿ, ಕೊಳವೆಬಾವಿಗಳು ಕುಸಿಯುವುದನ್ನು ತಡೆಯಲು ನೆಲ ಮಟ್ಟದಿಂದ 2x2 ಅಡಿ ಎತ್ತರದ ದಿಬ್ಬ ಇಲ್ಲವೇ ಬೇಲಿ ಹಾಕಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಸ್ಥಳೀಯ ಪ್ರಾಧಿಕಾರಗಳು, ಪಾಲಿಕೆ, ಪುರಸಭೆಗಳಂತಹ ಸಂಸ್ಥೆಗಳ ಕಿರಿಯ ಎಂಜಿನಿಯರ್ಗಳು ಕೊರೆಸಲಾದ ಬಾವಿಗಳ ಮೇಲೆ ನಿಗಾ ಇಡಬೇಕು. ನಿಷ್ಕ್ರಿಯಗೊಂಡ ಕೊಳವೆ ಬಾವಿಗಳನ್ನು ಮುಚ್ಚಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮಳೆಕೊಯ್ಲು ಅಳವಡಿಸಿಕೊಳ್ಳಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಅಂತರ್ಜಲ ಬಳಕೆ ಪ್ರಮಾಣವು ಹೆಚ್ಚಾಗುತ್ತಿದೆ. ಹೀಗಾಗಿ ಮಳೆನೀರನ್ನು ಸಂಗ್ರಹಿಸಿ ಉಪಯೋಗಿಸಲು, ಮಳೆನೀರು ಕೊಯ್ಲು ಪದ್ಧತಿಯನ್ನು ಕಡ್ಡಾಯವಾಗಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಅಳವಡಿಸಿಕೊಳ್ಳಬೇಕು. ಅಂತರ್ಜಲ ಮರು ಪೂರೈಕೆ ರಚನೆಗಳನ್ನು ನಿರ್ಮಿಸಿ ಹೆಚ್ಚಿನ ಮಳೆ ನೀರನ್ನು ಭೂಮಿಗೆ ಇಂಗಿಸಬೇಕು. ರೈತರು ಕೃಷಿಹೊಂಡ, ಇಂಗುಗುಂಡಿ, ತುಂತುರು ಮತ್ತು ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿ ಪ್ರಸನ್ನಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-38-1042835287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.