ಮೈಸೂರು: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ‘ಅರ್ಹತೆ’ ಇಲ್ಲದಿದ್ದರೂ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡು, ಬಡವರ ಅನ್ನಕ್ಕೆ ‘ಕನ್ನ’ ಹಾಕುವ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡ 24,703 ಚೀಟಿದಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಪರಿಶೀಲನೆ ಕಾರ್ಯ ಮುಂದುವರಿದಿದ್ದು, ಮತ್ತಷ್ಟು ಮಂದಿಯ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ. ಸರ್ಕಾರಿ ನೌಕರರಾಗಿದ್ದಲ್ಲಿ ‘ದಂಡಾಸ್ತ್ರ’ ಪ್ರಯೋಗಿಸುವುದಕ್ಕೂ ಅಹಾರ ಇಲಾಖೆ ಕ್ರಮ ವಹಿಸಿದೆ.

ಬಡವರು, ಕಡುಬಡವರು ಹಾಗೂ ಅಸಹಾಯಕ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಸದಸ್ಯರಿಗೆ ಉಚಿತವಾಗಿ ಅಕ್ಕಿ ಮೊದಲಾದ ಪಡಿತರವನ್ನು ನೀಡಲಾಗುತ್ತಿದೆ. ಇಂತಹ ಕಾರ್ಡ್ಗಳನ್ನು ವಾಮಮಾರ್ಗದಲ್ಲಿ ಪಡೆದುಕೊಂಡಿದ್ದವರ ವಿರುದ್ಧ ಕ್ರಮ ಜರುಗಿಸುವುದಕ್ಕೆ ಚಾಲನೆ ನೀಡಲಾಗಿದೆ. ಸ್ಥಿತಿವಂತರಾದರೂ ಬಿಪಿಎಲ್ ಎಂದು ಹೇಳಿಕೊಂಡು ಸೌಲಭ್ಯ ಪಡೆದುಕೊಳ್ಳುವುದಕ್ಕೆ ಕಡಿವಾಣ ಹಾಕಲಾಗುತ್ತಿದೆ. ಅಂಥವರ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ಗೆ ಮಾರ್ಪಾಡು ಮಾಡಲಾಗಿದೆ. ಇನ್ಮುಂದೆ ಅವರು, ಅಕ್ಕಿ ಮೊದಲಾದ ಪಡಿತರ ಬೇಕಾದರೆ ನಿಗದಿಪಡಿಸಿದ ದರವನ್ನು ಕೊಟ್ಟು ಖರೀದಿಸಬೇಕಾಗುತ್ತದೆ.

ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ, ಅಕ್ರಮವಾಗಿ ಅಥವಾ ನಿಗದಿತ ಮಾನದಂಡ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ಗಳನ್ನು ಪಡೆದಿರುವುದನ್ನು ಪತ್ತೆ ಹಚ್ಚಲಾಗಿದೆ. ಮೈಸೂರು ನಗರವೂ ಸೇರಿದಂತೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 11,817 ಕಾರ್ಡ್ಗಳನ್ನು ಎಪಿಎಲ್ಗೆ ಪರಿವರ್ತಿಸಲಾಗಿದೆ! ಸರಗೂರು ತಾಲ್ಲೂಕಿನಲ್ಲಿ ಈ ಪ್ರಮಾಣ ಅತ್ಯಂತ ಕಡಿಮೆ (44) ಇದೆ.

ಪ್ರಸ್ತುತ ಜಿಲ್ಲೆಯಲ್ಲಿ ಬಿಪಿಎಲ್ ಪಡಿತರ ಚೀಟಿಗಳ ಸಂಖ್ಯೆ ಒಟ್ಟು 6,31,923 ಆಗಿದೆ.

ಐಟಿ, ಜಿಎಸ್ಟಿ ಪಾವತಿಸುವವರು, ಸಾಕಷ್ಟು ಜಮೀನು ಹೊಂದಿರುವವರು, ಹೆಚ್ಚಿನ ಆದಾಯವನ್ನೂ ಗಳಿಸುತ್ತಿರುವವರು, ಸರ್ಕಾರಿ ನೌಕರಿಯಲ್ಲಿ ಇರುವವರು ಸೇರಿದಂತೆ ವಿವಿಧ ಕಾರಣಗಳಿಂದಾಗಿ ಅವರ 24,703 ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್ಗೆ ಪರಿವರ್ತಿಸಲಾಗಿದೆ. ಪರಿಶೀಲನೆ ಪ್ರಕ್ರಿಯೆಮುಂದುವರಿಯಲಿದೆ. ಅನರ್ಹರನ್ನು ಪಟ್ಟಿಯಿಂದ ಕೈಬಿಡಲಾಗುವುದು. ಅರ್ಹರಿದ್ದಲ್ಲಿ ಪರಿಶೀಲಿಸಿ ಸೇರ್ಪಡೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿರುವುದರಿಂದ ಆದಾಯದ ಮಾಹಿತಿ ದೊರೆಯುತ್ತಿದೆ. ಇದರ ಆಧಾರದ ಮೇಲೆ ಕೇಂದ್ರ ಸರ್ಕಾರದಿಂದ ಅನರ್ಹರ ಪಟ್ಟಿಯನ್ನು ನೀಡಲಾಗಿದ್ದು, ಅದರಲ್ಲಿ ಇರುವವರನ್ನು ಬಿಪಿಎಲ್ ಪಡಿತರ ಚೀಟಿದಾರರ ಪಟ್ಟಿಯಿಂದ ತೆಗೆಯುವಂತೆ ಸೂಚಿಸಲಾಗಿದೆ. ಅರ್ಹರಿದ್ದಲ್ಲಿ ಸ್ಥಳ ಪರಿಶೀಲಿಸಿ ಮತ್ತೊಮ್ಮೆ ಬಿಪಿಎಲ್ ಕಾರ್ಡ್ ನೀಡುವುದಕ್ಕೆ ಅಡ್ಡಿ ಇಲ್ಲ ಎಂದೂ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-39-733168741

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.