ಮೈಸೂರು: ‘ಪ್ರತಿ ದೇಶವೂ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಪಾಲಿಸಿದರೆ ಯುದ್ಧವೇ ನಡೆಯುವುದಿಲ್ಲ’ ಎಂದು ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ವಾಜಪೇಯಿ ಹೇಳಿದರು.

ಇಲ್ಲಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಮಾಬಾಯಿ ಅಂಬೇಡ್ಕರ್ ಸರ್ವೋದಯ ಮಹಿಳಾ ಒಕ್ಕೂಟದ 7ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜವನ್ನು ಸರಿದಾರಿಗೆ ತರಲು ಮಾರ್ಗದರ್ಶಕರಾಗಿದ್ದಾರೆ. ಅಸಮತೋಲನ ಸರಿಪಡಿಸಲು ಅವರ ತತ್ವಾದರ್ಶಗಳು ದಾರಿದೀಪವಾಗಿವೆ. ಪ್ರತಿಯೊಬ್ಬರೂ ಸುಶಿಕ್ಷಿತರಾದಲ್ಲಿ ಸಮಾನತೆ ಬರುತ್ತದೆ’ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ‘ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಯೋಗದಿಂದಾಗಿ ಭಾರತ ವಿಶ್ವಪ್ರಸಿದ್ಧಿಯಾಗಿದೆ. ಅಂಬೇಡ್ಕರ್ ಕೇವಲ ಭಾರತವಲ್ಲ, ಇಡೀ ವಿಶ್ವದ ಸ್ವತ್ತು’ ಎಂದು ಹೇಳಿದರು.

ಮುಖಂಡ ಅಹಿಂದ ಜವರಪ್ಪ ಮಾತನಾಡಿ, ‘ಅಂಬೇಡ್ಕರ್ ಅವರು ಅತ್ಯುತ್ತಮ ಸಂವಿಧಾನ ಕೊಟ್ಟಿದ್ದರೂ, ಅವರ ವಿಚಾರಧಾರೆಗಳು ವ್ಯಾಪಕವಾಗಿ ಹರಡಿದ್ದರೂ ಇನ್ನೂ ದೌರ್ಜನ್ಯ, ದಬ್ಬಾಳಿಕೆ ನಿಂತಿಲ್ಲ. ಅನ್ಯಾಯವನ್ನು ಪ್ರಶ್ನಿಸದ ಸ್ಥಿತಿ ಇದೆ’ ಎಂದರು.

ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳೇ ಕಳೆದರೂ ಇನ್ನೂ ಶ್ರೇಣಿಕೃತ ವ್ಯವಸ್ಥೆ, ಅಸಮಾನತೆ ಇರುವುದು ಪ್ರತಿಯೊಬ್ಬರೂ ತಲೆತಗ್ಗಿಸಬೇಕಾದ ಸಂಗತಿ’ ಎಂದು ತಿಳಿಸಿದರು.

ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿದರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿರುವ ಜಿ. ದೀಪ್ತಿ, ಎಂ.ಆರ್. ಹೇಮಂತ್, ಚಂದನಾ ಹಾಗೂ ಎಂ. ಭುವನ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ರಮಾಬಾಯಿ ಅಂಬೇಡ್ಕರ್ ಸರ್ವೋದಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಯಾಲಕ್ಕಯ್ಯ ಸಂವಿಧಾನ ಪೀಠಿಕೆ ಬೋಧಿಸಿದರು. ಕಾರ್ಯದರ್ಶಿ ಎಂ. ಹೇಮಲತಾ ಸ್ವಾಗತಿಸಿದರು.

ಕಮಲಾ, ಶ್ವೇತಾ, ಸುಮತಿ, ಮಹದೇವಮ್ಮ, ಕೋಮಲಾ, ಶಕುಂತಲಾ ಶ್ರೀಧರ್, ಭಾಗ್ಯವತಿ ನಾಡಗೀತೆ ಹಾಡಿದರು. ಶ್ವೇತಾ ಅಂಬೇಡ್ಕರ್ ಕುರಿತು ಸ್ವರಚಿತ ಕವನ ಓದಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-39-473138706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.