ಮೈಸೂರು: ‘ಗೌತಮ ಬುದ್ಧ ಶಾಂತಿ ಸಾರುವ ಪ್ರಪಂಚದ ಬೆಳಕು’ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ಇಲ್ಲಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ತಿ.ನರಸೀಪುರದ ಯಾಚೇನಹಳ್ಳಿಯ ‘ನನ್ನವ್ವ ಸಾಂಸ್ಕೃತಿಕ ಕಲಾತಂಡ’ದಿಂದ ಶುಕ್ರವಾರ ಬುದ್ಧ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಯುದ್ಧಕ್ಕೆ ಪರಿಹಾರ ಬುದ್ಧ’ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬುದ್ಧ ಇಡೀ ಜಗತ್ತಿಗೆ ಜ್ಞಾನದ ಮಹಿಮೆಯನ್ನು ತುಂಬಲು ಜನಿಸಿದ ದಾರ್ಶನಿಕ. ಅವರು ಪಾಳಿ ಭಾಷೆಯಲ್ಲಿ ಧಮ್ಮವನ್ನು ಬೋಧಿಸಿದರು. ನಾನು ಬೋಧಿಸುವುದರಲ್ಲಿ ಹೊಸದೇನೂ ಇಲ್ಲ, ಸತ್ಯವನ್ನು ಕಂಡುಕೊಳ್ಳುವುದರಲ್ಲಿ ನಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲ ಎಂದು ಜಗತ್ತಿಗೆ ಸಾರಿದರು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ‘ಅಂಬೇಡ್ಕರ್ ಅವರು ಬುದ್ಧನ ಅನುಯಾಯಿ ಆಗದಿದ್ದರೆ ಬುದ್ಧನ ವಿಚಾರಗಳಿಗೆ ಇಷ್ಟು ಪ್ರಾಮುಖ್ಯತೆ ಬರುತ್ತಿರಲಿಲ್ಲ. ಎಲ್ಲರೂ ಮರೆತುಬಿಡುವ ಸಾಧ್ಯತೆ ಇತ್ತು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಹಿತಿ ಪ್ರಭಾಶಾಸ್ತ್ರಿ ಜೋಶ್ಯುಲ, ಉಪನ್ಯಾಸಕಿ ಟಿ.ಪದ್ಮಶ್ರೀ, ಕರುನಾಡ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಸತೀಶ್ ಹೆಗ್ಗೂರು, ಸುತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜೀಮಾರಹಳ್ಳಿ ರಂಗಸ್ವಾಮಿ, ಕಲಾತಂಡದ ಅಧ್ಯಕ್ಷ ಯಾಚೇನಹಳ್ಳಿ ಮಹದೇವ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-37-1314093084

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.