ಮೈಸೂರು: ‘ಶಾಲಾ, ಕಾಲೇಜು ದಾಖಲಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ದಾಖಲಾತಿಗೆ ತೊಂದರೆಯಾಗದಂತೆ ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಆದ್ಯತೆ ನೀಡಿ ವಿತರಿಸಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯಾ ತಹಶೀಲ್ದಾರ್ಗಳಿಗೆ ಸೂಚನೆ ನೀಡಿದರು.

ಬಾಬು ಜಗಜೀವನ್ರಾಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಲ್ಲಿಸಬೇಕಿರುವ ದಾಖಲಾತಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ’ ಎಂದರು.

ಸಮಿತಿ ಸದಸ್ಯ ಚಿಕ್ಕ ಜವರಯ್ಯ, ‘ಪೊಲೀಸ್ ಇಲಾಖೆ ವತಿಯಿಂದ ನಡೆಸಲಾಗುವ ಕುಂದುಕೊರತೆ ಸಭೆಗಳಿಗೆ ಆಯಾ ವ್ಯಾಪ್ತಿಯ ಪರಿಶಿಷ್ಟ ಜಾತಿ/ ಪಂಗಡದ ಮುಂಖಡರನ್ನು ಆಹ್ವಾನಿಸಿದರೆ, ಬಹಳಷ್ಟು ತೊಂದರೆಗಳ ಬಗ್ಗೆ ಚರ್ಚಿಸಬಹುದು’ ಎಂದರು. ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಸಮಿತಿ ಸಭೆಗಳನ್ನು ನಡೆಸುವಂತೆ ಸೂಚಿಸಿದರು.

ನಗರದ ಕೆಲವು ಬಡಾವಣೆ, ವೃತ್ತಗಳಿಗೆ, ದ್ವಾರಗಳಿಗೆ ಡಾ. ಬಿ.ಅರ್ ಅಂಬೇಡ್ಕರ್ ಅವರ ಹೆಸರು ನಾಮಕರಣ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಮೈಸೂರು ತಾಲ್ಲೂಕಿನ ಆಲನಹಳ್ಳಿ ಗ್ರಾಮದ ಸರ್ವೆನಂ. 28 ರಲ್ಲಿ ಜಮೀನು ಒತ್ತುವರಿಯಾಗಿರುವ ಬಗ್ಗೆ ಸದಸ್ಯರು ದೂರಿದ್ದು, ಸ್ಥಳ ಪರಿಶೀಲನೆ ನಡೆಸಿ ಒತ್ತುವರಿಯಾಗಿದ್ದಲ್ಲಿ ಕ್ರಮ ಕೈಗೊಳ್ಳುವಂತೆ ಐಶ್ವರ್ಯಾ ನಿರ್ದೇಶನ ನೀಡಿದರು.

ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಎಸ್.ಟಿ. ರವಿಕುಮಾರ್, ಪಾರ್ವತಮ್ಮ, ವೇಣು ಗೋಪಾಲ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸವಿತಾ, ಪಾಲಿಕೆ ಉಪ ಆಯುಕ್ತೆ ವೀಣಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-39-885204067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.