ಮೈಸೂರು: ಪಬ್ನಲ್ಲಿ ಜಗಳವಾಡಿದ ಆರೋಪದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಮೋಹನ್ ಚಾಮುಂಡಿ ಬೆಟ್ಟದ ರಸ್ತೆಯ ಜೆಸಿ ನಗರದ ಪಬ್ಗೆ ತೆರಳಿ, ಕ್ಷುಲ್ಲಕ ಕಾರಣಕ್ಕೆ ಅಲ್ಲಿದ್ದವರೊಂದಿಗೆ ಜಗಳವಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸಿಬ್ಬಂದಿಗೆ ‘ನಾನು ಸಿಸಿಬಿ ಪೊಲೀಸ್ ಅಧಿಕಾರಿ. ನೀವು ನನ್ನನ್ನು ಏನೂ ಮಾಡಲು ಆಗುವುದಿಲ್ಲ’ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಘಟನೆಯನ್ನು ಮೊಬೈಲ್ನಲ್ಲಿ ಸೆರೆಹಿಡಿದ ಕೆಲವರು, ಸಾರ್ವಜನಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಷಯ ತಿಳಿದ ಆಯುಕ್ತರು ಆದೇಶ ಪ್ರಕಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.