ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ಗೌಡ ಅವರು ಇಲ್ಲಿನ ಹೆಬ್ಬಾಳು, ಮಂಚೇಗೌಡನಕೊಪ್ಪಲು, ಸುಬ್ರಹ್ಮಣ್ಯ ನಗರ, ಲಕ್ಷ್ಮೀಕಾಂತ ನಗರ, ಕಟ್ಟೆಹೊಸೂರು, ಮಹಾಜನ, ವಾಣಿವಿಲಾಸ ಬಡಾವಣೆಯಲ್ಲಿ ಬುಧವಾರ ಸಂಚರಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಗುಣಮಟ್ಟ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ಕೂಟರ್ನಲ್ಲಿ ಸ್ಥಳೀಯ ಮುಖಂಡರು, ಗುತ್ತಿಗೆದಾರರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಂಚರಿಸಿದ ಅವರು, ರಸ್ತೆ, ಒಳಚರಂಡಿ, ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.

ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿದರು. ಮಳೆಗಾಲದಲ್ಲಿ ನೀರಿನ ಸಮಸ್ಯೆ ಉಂಟಾಗುವುದು, ರಸ್ತೆ ಗುಂಡಿಗಳನ್ನು ಮುಚ್ಚದಿರುವುದು ಹಾಗೂ ಬೀದಿ ದೀಪಗಳ ಕೊರತೆ ಬಗ್ಗೆ ಸಾರ್ವಜನಿಕರು ಶಾಸಕರ ಗಮನಸೆಳೆದರು.

‘ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಲ್ಲ ಕಾಮಗಾರಿಗಳನ್ನೂ ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಲೋಪ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಮೊದಲ ಆದ್ಯತೆ. ಅಧಿಕಾರಿಗಳು ಸೌಹಾರ್ದಯುತವಾಗಿ ವರ್ತಿಸಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು’ ಎಂದು ಸೂಚಿಸಿದರು.

ನಗರಪಾಲಿಕೆ ವಲಯ ಕಚೇರಿ 5ರ ಇಇ ಹಿತೇಂದ್ರ, ವಾಣಿವಿಲಾಸ ಇಇ ಅಶ್ವಿನ್, ಎಇಇ ಶುಶ್ರುತ್, ಎಇ ಪ್ರಭಾಮಣಿ, ಅಶ್ವಿನಿ, ಮುದ್ದುಮಲ್ಲೇಗೌಡ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-39-359021582

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.