ಮೈಸೂರು: ‘ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ‘ಜನರೊಂದಿಗೆ ಜನತಾದಳ’ ಸಮಾವೇಶ ಏ.16ರಂದು (ಭಾನುವಾರ) ಬೆಳಿಗ್ಗೆ 11ಕ್ಕೆ ಹೊರ ವಲಯದ ಬೋಗಾದಿ ವರ್ತುಲ ರಸ್ತೆಯ ನಾಗಲಿಂಗೇಶ್ವರ-ಬೋಗೇಶ್ವರ ದೇವಸ್ಥಾನದ ಎದುರಿನ ಮೈದಾನದಲ್ಲಿ ನಡೆಯಲಿದ್ದು, 40ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವರು’ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ತಿಳಿಸಿದರು.

ಸಮಾವೇಶ ಸ್ಥಳದಲ್ಲಿ ಶನಿವಾರ ಸಿದ್ಧತೆ ಪರಿಶೀಲಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮೊದಲಾದ ನಾಯಕರು ಪಾಲ್ಗೊಳ್ಳುವರು’ ಎಂದರು.

ಶಾಸಕ ಜಿ.ಡಿ. ಹರೀಶ್ ಗೌಡ ಮಾತನಾಡಿ, ‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾರ್ಗದರ್ಶನ, ಎಚ್.ಡಿ.ಕುಮಾರಸ್ವಾಮಿ ನಾಯಕತ್ವ, ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಬಲಪಡಿಸಲು ರಾಜ್ಯದಾದ್ಯಂತ ‘ಜನರೊಂದಿಗೆ ಜನತಾದಳ’ ಸಮಾವೇಶ ನಡೆಸಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ನಡೆದ ಈ ಸಮಾವೇಶವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೊನೆಯಾಗಲಿದೆ’ ಎಂದು ತಿಳಿಸಿದರು.

ಮೆರವಣಿಗೆ: ‘ಇದುವರೆಗೂ ನಡೆದಿರುವ ಸಮಾವೇಶಗಳು ಯಶಸ್ವಿಯಾದಂತೆ ಚಾಮುಂಡೇಶ್ವರಿ ಕ್ಷೇತ್ರದ ಸಮಾವೇಶವೂ ಸಫಲಗೊಳ್ಳಲಿದೆ. ಇದಕ್ಕಾಗಿ15 ದಿನಗಳಿಂದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ’ ಎಂದರು.

‘ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಬೋಗಾದಿ ಸಿಗ್ನಲ್ನಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ವೇದಿಕೆಯವರೆಗೆ ಕರೆದೊಯ್ಯಲಾಗುವುದು. ಜಾನಪದ ಕಲಾತಂಡಗಳು ಭಾಗವಹಿಸಲಿವೆ. ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರಷ್ಟೇ ಪಾಲ್ಗೊಳ್ಳುವರು’ ಎಂದು ಮಾಹಿತಿ ನೀಡದರು.

‘ಚಾಮುಂಡೇಶ್ವರಿ ಕ್ಷೇತ್ರ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಶಕ್ತಿ ನೀಡಿದಕ್ಷೇತ್ರ. ಇಲ್ಲಿ ಸಮಾವೇಶವನ್ನು ಸಾಮೂಹಿಕ ನಾಯಕತ್ವದ ಪಡೆಯೊಂದಿಗೆ ನಡೆಸಲಾಗುತ್ತಿದೆ. ಇದು ಜೆಡಿಎಸ್ ಭದ್ರಕೋಟೆ ಎಂಬುದನ್ನು ಕಾರ್ಯಕರ್ತರು ಸಾಬೀತುಪಡಿಸಲಿದ್ದಾರೆ’ ಎಂದರು.

ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಶಾಸಕ ಕೆ.ಮಹದೇವ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಅಶ್ವಿನ್ಕುಮಾರ್, ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಸ್ಬಿಎಂ ಮಂಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರಗೌಡ, ಮುಖಂಡರಾದ ಗಂಗಾಧರಗೌಡ, ಕೆ.ಎಂ.ಕೃಷ್ಣ ನಾಯಕ, ಅಭಿಷೇಕ್ ಮಣೇಗಾರ್, ಶಿವಕುಮಾರ, ಸೋಮು, ಸಂತೋಷ್, ರಾಮು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-39-192860426

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.