ಮೈಸೂರು: ‘ಮನುಷ್ಯನ ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ’ ಎಂದು ಯೋಗನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್. ಶ್ರೀನಿವಾಸನ್ ಅಭಿಪ್ರಾಯಪಟ್ಟರು.

ಜಗನ್ಮೋಹನ ಅರಮನೆ ಆವರಣದಲ್ಲಿ ಗುರುದೇವ ಅಕಾಡೆಮಿ ಆಫ್ ಫೈನ್ ಆರ್ಟ್ ವತಿಯಿಂದ ಈಚೆಗೆ ಆಯೋಜಿಸಿದ್ದ ‘ಚೇತನೋತ್ಸವ -2026’ ಶಾಸ್ತ್ರೀಯ ನೃತ್ಯಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕತೆಯ ಜಗದೊಳಗೆ ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಲು ಶಾಸ್ತ್ರೀಯ ನೃತ್ಯ ಕಲೆಗಳು ಉತ್ತಮ ಆಯ್ಕೆಯಾಗಿದೆ. ಇದು ರೋಗಕ್ಕೆ ಮದ್ದಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಗುರುದೇವ ಅಕಾಡೆಮಿ ಆಫ್ ಫೈನ್ಆರ್ಟ್ ವತಿಯಿಂದ ಸಮಾಜ ಸೇವಕ ಅಚ್ಯುತ ರಾಮಪ್ರಸಾದ ಕಾಮತ್ ಅವರಿಗೆ ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ತಾ.ಪಂ. ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಸ್ವಾಮಿ, ವಕೀಲ ವಿಶ್ವನಾಥ್ ದೇವಸ್ಯ, ವ್ಯವಸ್ಥಾಪಕ ನಿರ್ದೇಶಕ ಪಿ.ಎಂ.ರಾಧಾಕೃಷ್ಣ, ಕಲಾತ್ಮಕ ನಿರ್ದೇಶಕರಾದ ಚೇತನ ರಾಧಾಕೃಷ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.