ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಸಿಎಂ

Published : 3 ಆಗಸ್ಟ್ 2024, 10:03 IST
Last Updated : 3 ಆಗಸ್ಟ್ 2024, 10:03 IST
ಫಾಲೋ ಮಾಡಿ
Comments

ಮೈಸೂರು: ಇಲ್ಲಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.

ಮುಖ್ಯಮಂತ್ರಿ ಕಾರು ಬಿಳಿಕೆರೆ ಕ್ರಾಸ್ ಸಮೀಪಿಸುತ್ತಿದ್ದಂತೆ ಬಿಳಿಕೆರೆ ಕ್ರಾಸ್ ನಿಂದ ಯಡಗೊಂಡನಹಳ್ಳಿವರೆಗಿನ 41ಕಿಮೀ ಉದ್ದದ ನಾಲ್ಕು ಪಥ ರಾಷ್ಟ್ರೀಯ ಹೆದ್ದಾರಿ ಉದ್ದೇಶಿತ ಯೋಜನೆ ಬಗ್ಗೆ ಮಾಹಿತಿ ಪಡೆದರು.

600 ಕೋಟಿ ರೂಪಾಯಿ ವೆಚ್ಚದ ಈ ಯೋಜನೆ ಟೆಂಡರ್ ಕರೆಯಲಾಗಿದೆ ಎನ್ನುವ ಮಾಹಿತಿ ಅಧಿಕಾರಿಗಳಿಂದ ಬಂತು.

ಮಾರ್ಗದಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿದ್ದಕ್ಕೆ ಗರಂ ಆದ ಮುಖ್ಯಮಂತ್ರಿ, ಇದರಿಂದ ಅಪಘಾತಗಳ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮಳೆ ಇಲ್ಲದ ಸಮಯ ನೋಡಿಕೊಂಡು ಗುಂಡಿಗಳನ್ನು ಮುಚ್ಚಿಸುವಂತೆ ಸೂಚನೆ ನೀಡಿದರು.

ಅಪಾಯದ ಅಂಚಿನಲ್ಲಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲು ಸೂಚನೆ:

ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕಾಡನೂರು ಮಾರ್ಗವಾಗಿ ಸಾಗಿತ್ತಿದ್ದಂತೆ, ಅಪಾಯಕ್ಕೆ ಆಹ್ವಾನ ನೀಡುವಂತಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಿ, ವೈರ್ ಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ದೂರವಾಣಿ ಮೂಲಕವೇ ಸೂಚಿಸಿದರು.

ಹಳ್ಳಿ ಮೈಸೂರು ಹಾದು ಹೋಗುವಾಗ ಹಾಳಾಗಿದ್ದ ರಸ್ತೆ ವಿಭಜಕಗಳನ್ನು ಗುರುತಿಸಿ ಸರಿಪಡಿಸಲು ಸೂಚನೆ ನೀಡಿದರು.

ನಾನು ಹುಟ್ಟು ಹಬ್ಬ ಮಾಡಲ್ಲ: ಇವೆಲ್ಲಾ ಯಾಕೆ ತಂದ್ರಿ?:

ಮಾರ್ಗದುದ್ದಕ್ಕೂ ಅಭಿಮಾನಿಗಳು ಹುಟ್ಟುಹಬ್ಬದ ಶುಭ ಕೋರಲು ಹಾರ ತುರಾಯಿ, ಶಾಲುಗಳ ಸಮೇತ ಅಲ್ಲಲ್ಲಿ ಕಾದಿದ್ದರು. ಯಾವುದನ್ನೂ ಸ್ವೀಕರಿಸದ ಸಿಎಂ, ನಾನು ಹುಟ್ಟು ಹಬ್ಬ ಆಚರಿಸಲ್ಲ. ಇವೆಲ್ಲಾ ಯಾಕೆ ತಂದ್ರಿ ಎಂದು ಕೇಳಿ, ಕೈ ಬೀಸುತ್ತಾ, ಕೈ ಮುಗಿಯುತ್ತಾ  ಸಾಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT