ಮೈಸೂರು: ‘ಜಿಲ್ಲೆಯಲ್ಲಿ ಏ.20ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಅಂಗವಾಗಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆಗಳಿವೆ. ಇದನ್ನು ತಡೆಯಲು ‘ಬಾಲ್ಯವಿವಾಹ ನಿಷೇಧಾಧಿಕಾರಿಗಳು’ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದ್ದಾರೆ.

‘ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ–2016 ಪ್ರಕಾರ, ಇಂತಹ ಮದುವೆ ಏರ್ಪಡಿಸಿದ ಪೋಷಕರು, 18 ವರ್ಷದೊಳಗಿನ ಹುಡುಗಿ ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಸಹಕರಿಸಿದ ಕುಟುಂಬಸ್ಥರನ್ನೂ ತಪ್ಪಿತಸ್ಥರು ಎಂದು ಪರಿಗಣಿಸಲಾಗುತ್ತದೆ. ಅವರ ವಿರುದ್ಧ ಒಂದು ವರ್ಷಕ್ಕೆ ಕಡಿಮೆ ಇಲ್ಲದೆ ಅಂದರೆ 2 ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ವಿಧಿಸಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.

‘ಪೊಲೀಸರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳ ಮತ್ತು ಕಲ್ಯಾಣಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ (0821-2543003)ಕ್ಕೆ ಮಾಹಿತಿ ನೀಡಬೇಕು’ ಎಂದು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-39-932994215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.