ಮೈಸೂರು: ಬಾಲ್ಯವಿವಾಹ ಮಾಡಿಸಿದ 7 ಮಂದಿ ವಿರುದ್ಧ ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಮಂಜುನಾಥಪುರದಲ್ಲಿರುವ ಮಾರಮ್ಮನ ದೇವಸ್ಥಾನದಲ್ಲಿ ಮೇ 13ರಂದು ಮಂಜುನಾಥಪುರದ 30 ವರ್ಷದ ಯುವಕನೊಂದಿಗೆ 16 ವರ್ಷದ ಬಾಲಕಿಯೊಂದಿಗೆ ಬಾಲ್ಯವಿವಾಹ ನಡೆದಿತ್ತು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ಅವರು ಬಾಲಕಿಯೊಂದಿಗೆ ಆಪ್ತ ಸಮಾಲೋಚನೆ ನಡೆಸಿ, ವಿವಾಹ ನಡೆದಿರುವ ಬಗ್ಗೆ ಮಾಹಿತಿ ಪಡೆದರು.

ಮೇ 27ರಂದು ವಿ.ವಿ.ಪುರಂ ಠಾಣೆಗೆ ಭೇಟಿ ನೀಡಿ, ವಿವಾಹವಾದ ಯುವಕ ಹಾಗೂ ಮದುವೆ ಮಾಡಿಸಿದ ಎರಡು ಕುಟುಂಬಸ್ಥರು ಸೇರಿದಂತೆ 7 ಮಂದಿ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-1694116978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.