ಕೆ.ಆರ್.ನಗರ: ‘ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭವಾಗದೇ ಇರುವುದಕ್ಕೆ ಕಾರಣ ತಿಳಿಸಬೇಕು’ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಅಂಕನಹಳ್ಳಿ ತಿಮ್ಮಪ್ಪ ಸರ್ಕಾರವನ್ನು ಒತ್ತಾಯಿಸಿದರು.

ಇಲ್ಲಿನ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ತಹಶೀಲ್ದಾರ್ಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದ ಅವೆರು, ‘ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಸರ್ಕಾರ ನೀಡಬೇಕಾಗಿರುವ ಬಾಕಿ ಹಣ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು, ಕಾರ್ಖಾನೆಗಳ ಮುಂದೆ ತೂಕದ ಯಂತ್ರ ಇಡಬೇಕು’ ಎಂದು ಒತ್ತಾಯಿಸಿದರು.

‘ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು. ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್ಗಳಲ್ಲಿ ಚಿನ್ನದ ಮೇಲಿನ ಸಾಲಕ್ಕೆ ಸಿಬಿಲ್ ಸ್ಕೋರ್ ಕೇಳಬಾರದು, ಅಸಲು ಮತ್ತು ಬಡ್ಡಿ ಒಟ್ಟಿಗೆ ಕಟ್ಟಿ ಎಂದು ರೈತರನ್ನು ಒತ್ತಾಯಿಸಬಾರದು. ನವೀಕರಣಕ್ಕೆ ಒತ್ತಾಯಿಸದೇ ಬಡ್ಡಿ ಕಟ್ಟಿಸಿಕೊಂಡು ನವೀಕರಣ ಮಾಡಬೇಕು. ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡುವ ಕೃಷಿ ಸಾಲವನ್ನೂ ಪ್ರತಿ ಎಕರೆಗೆ ₹2 ಲಕ್ಷಕ್ಕೆ ಏರಿಸಬೇಕು’ ಎಂದು ಆಗ್ರಹಿಸಿದರು.

ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ವೀಣಾ, ಮುಖಂಡರಾದ ಟಿ.ಸಿ.ಬಸವರಾಜು, ದಿನೇಶ್, ಕಾಳೇಗೌಡ, ಶಿವಣ್ಣ, ಮಾಯಿಗೌಡ, ತಿಟ್ಟೂರು ಲೋಕೇಶ್, ನಿರ್ಮಲಾ, ವೀಣಾ, ಏನೋದ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-38-390565442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.