ಮೈಸೂರು: ಸರ್ಕಾರದ ಸೇವಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಸಕಾಲದಲ್ಲಿ ದೊರಕುವಂತೆ ಮಾಡುವ ನಿಟ್ಟಿನಲ್ಲಿ, ಕುಂದುಕೊರತೆ ನಿವಾರಣೆಗಾಗಿ ವಲಯ ಕಚೇರಿಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದ್ದಾರೆ.

‘ಕರ್ನಾಟಕ ಪೌರನಿಗಮಗಳ ಅಧಿನಿಯಮ-1976ರ ಪ್ರಕಾರ ಗೊತ್ತುಪಡಿಸಲಾದ ಹಾಗೂ ಕಾಲಕಾಲಕ್ಕೆ ಸರ್ಕಾರದಿಂದ ಹೊರಡಿಸುವ ಅಧಿಸೂಚನೆ, ಸುತ್ತೋಲೆ, ಆದೇಶಗಳ ಅನ್ವಯ ನಗರದ ಜನತೆಗೆ ನಗರಪಾಲಿಕೆಯಿಂದ ಸೌಲಭ್ಯ ಒದಗಿಸಲಾಗುತ್ತಿದೆ. ಸಾರ್ವಜನಿಕ ರಸ್ತೆ, ಒಳಚರಂಡಿ, ಕುಡಿಯುವ ನೀರು, ಮಾರುಕಟ್ಟೆ, ಸಾರ್ವಜನಿಕ ಆರೋಗ್ಯ, ಜನನ ಮತ್ತು ಮರಣ ನೋಂದಣಿ, ಕಟ್ಟಡ ನಿರ್ಮಾಣ ರಹದಾರಿ ಮತ್ತು ನಿಯಂತ್ರಣ, ಸಾರ್ವಜನಿಕ ಉದ್ಯಾನಗಳ ನಿರ್ವಹಣೆ, ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ, ಆಸ್ತಿಗಳ ಖಾತೆ ಮತ್ತು ಕಂದಾಯ ಸೇವೆ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ವಲಯ ಕಚೇರಿವಾರಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಪಾಲಿಕೆಯ ಎಲ್ಲಾ 9 ವಲಯ ಕಚೇರಿಗಳಲ್ಲಿ ಪ್ರತಿ ಶುಕ್ರವಾರ (ಸಾರ್ವಜನಿಕ ರಜೆ ಹಾಗೂ ತುರ್ತು ಸಂದರ್ಭ ಹೊರತುಪಡಿಸಿ) ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ಜನಸ್ಪಂದನ ಕಾರ್ಯಕ್ರಮ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಾಗರಿಕರು ಕುಂದುಕೊರತೆ ಅರ್ಜಿಗಳನ್ನು ಲಿಖಿತವಾಗಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.