ಮೈಸೂರು: ಮಾರುಕಟ್ಟೆಗಳು ಹಾಗೂ ಈಜುಕೊಳಗಳ ನಿರ್ಮಾಣ, ಗ್ರೀನ್ ಪ್ರಾಪರ್ಟಿ ಟ್ಯಾಗ್, ಉದ್ಯಾನಗಳಲ್ಲಿ ಹೊರಾಂಗಣ ಸಂಗೀತ ವಾದ್ಯಗಳ ಅಳವಡಿಕೆ ಮೊದಲಾದ ಯೋಜನೆಗಳನ್ನು ಒಳಗೊಂಡಿರುವ 2026–27ನೇ ಸಾಲಿನ ಮಹಾನಗರಪಾಲಿಕೆಯ ಬಜೆಟ್ಗೆ ಅನುಮೋದನೆ ನೀಡಲಾಯಿತು.

ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಸಭೆಯಲ್ಲಿ, ಆಡಳಿತಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ ಅವರು ₹ 1,311.13 ಕೋಟಿ ಗಾತ್ರದ ಬಜೆಟ್ ಮಂಡಿಸಿದರು. ಇದರಲ್ಲಿ ₹1,300.92 ಕೋಟಿ ಖರ್ಚಾಗಲಿದ್ದು, ₹ 10.20 ಕೋಟಿ ಉಳಿತಾಯ ಆಗಲಿದೆ ಎಂದು ಅಂದಾಜಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ನಿರೀಕ್ಷಿಸಲಾಗಿದೆ. ಯಾವುದೇ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿಲ್ಲ.

ಈ ನಗರ ಸ್ಥಳೀಯ ಸಂಸ್ಥೆಯಲ್ಲಿ ಸದ್ಯ ಜನಪ್ರತಿನಿಧಿಗಳಿಲ್ಲ. ಹೀಗಾಗಿ, ಅಧಿಕಾರಿಗಳು ಮಾತ್ರವೇ ಪಾಲ್ಗೊಂಡಿದ್ದರು. ಯಾವುದೇ ಚರ್ಚೆಯೂ ನಡೆಯಲಿಲ್ಲ.

‘ಬಜೆಟ್ನಲ್ಲಿ ಘೋಷಿಸಲಾದ ಯೋಜನೆಗಳ ಸಂಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು’ ಎಂಬ ಪ್ರಾದೇಶಿಕ ಆಯುಕ್ತರ ಸೂಚನೆಯೊಂದಿಗೆ ಸಭೆ ಮುಕ್ತಾಯಗೊಂಡಿತು.

ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಒಳಚರಂಡಿ ಕರ, ಯೋಜನೆ ಹಾಗೂ ನಿಬಂಧನೆಗಳಿಗೆ ಸಂಬಂಧಿಸಿದಂತೆ ವಿವಿಧ ಶುಲ್ಕಗಳು, ಉದ್ದಿಮೆ ಪರವಾನಗಿ ಶುಲ್ಕ, ಪಾಲಿಕೆ ಆಸ್ತಿಗಳಿಂದ ಬರುವ ಬಾಡಿಗೆ, ಜಾಹೀರಾತು ಶುಲ್ಕ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳಿಂದ ಆರ್ಥಿಕ ಸಂಪನ್ಮೂಲ ನಿರೀಕ್ಷಿಸಲಾಗಿದೆ.

ಹೊಸ ಯೋಜನೆಗಳೇನು?

ಚಾಮರಾಜ ಕ್ಷೇತ್ರ ವ್ಯಾಪ್ತಿಯ ಕುಂಬಾರಕೊಪ್ಪಲು ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಯೋಜಿಸಲಾಗಿದೆ. ಇಲ್ಲಿ ಆಧುನಿಕ ಮೂಲಸೌಕರ್ಯ ಕಲ್ಪಿಸಲಾಗುವುದು. ಇದಕ್ಕಾಗಿ ₹ 50 ಲಕ್ಷ ಕಾಯ್ದಿರಿಸಲಾಗಿದೆ.

ಪುರಭವನ ಅಭಿವೃದ್ಧಿ: ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳಿಗೆ ಹಾಗೂ ಸಭೆ–ಸಮಾರಂಭಗಳಿಗೆ ಪ್ರೋತ್ಸಾಹ ನೀಡಲೆಂದು ಪುರಭವನದ ಅಭಿವೃದ್ಧಿಗೆ ಯೋಜನೆ ಕೈಗೊಳ್ಳಲಾಗಿದೆ. ಇದಕ್ಕಾಗಿ ₹ 30 ಲಕ್ಷ ಕಾಯ್ದಿರಿಸಲಾಗಿದೆ.

ಈಜುಕೊಳ: ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಮೂರು ಈಜುಕೊಳಗಳನ್ನು ಪಿಪಿಪಿ/ ಹೈಬ್ರಿಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಕಾಮಗಾರಿಗಳ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರೀಕ್ಷಿಸಲು ಗುಣ ನಿಯಂತ್ರಣ ಉಪ ವಿಭಾಗ ಮತ್ತು ಪ್ರಯೋಗಾಲಯವನ್ನು ಸ್ಥಾಪಿಸಲು ಯೋಜಿಸಲಾಗಿದೆ. ಇದರಿಂದ, ನಿರ್ಮಾಣ ಹಂತದಲ್ಲಿರುವ ರಸ್ತೆ, ಕಟ್ಟಡ, ಸೇತುವೆ ಮೊದಲಾದ ಸಾರ್ವಜನಿಕ ಕಾಮಗಾರಿಗಳಲ್ಲಿ ಬಳಸುವ ಸಿಮೆಂಟ್, ಮರಳು, ಕಾಂಕ್ರೀಟ್ ಮತ್ತು ಡಾಂಬರನ್ನು ನಿಗದಿತ ಮಾನದಂಡದ ಪ್ರಕಾರ ಬಳಸಲಾಗಿದೆಯೇ ಎಂಬ ಗುಣಮಟ್ಟ ಖಚಿತಪಡಿಸಿಕೊಳ್ಳಲು ಅನುಕೂಲ ಆಗುತ್ತದೆ. ಇದಕ್ಕಾಗಿ ₹ 10 ಲಕ್ಷ ಕಾಯ್ದಿರಿಸಲಾಗಿದೆ.

ಜನಸ್ನೇಹಿ ಪಾದಚಾರಿ ಮಾರ್ಗಕ್ಕೆ ₹ 10 ಕೋಟಿ: ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯ ನಡುವೆ ಪಾದಚಾರಿಗಳ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಜನಸ್ನೇಹಿ ಪಾದಚಾರಿ ಮಾರ್ಗಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ಇದು ಸಂಚಾರಕ್ಕೆ ಮಾತ್ರವಲ್ಲದೆ, ಜನರ ಆರೋಗ್ಯ ವೃದ್ಧಿಗೂ ಪೂರಕವಾಗಿವೆ. ಈ ಉದ್ದೇಶಕ್ಕಾಗಿ ₹ 10 ಕೋಟಿ ಕಾಯ್ದಿರಿಸಲಾಗಿದೆ.

ಪುಟ್ಟರಾಜ ಗವಾಯಿ ಕ್ರೀಡಾಂಗಣ ಅಭಿವೃದ್ಧಿ:

ಪಾಲಿಕೆ ವ್ಯಾಪ್ತಿಯ ಜೆ.ಪಿ. ನಗರದಲ್ಲಿರುವ ಪುಟ್ಟರಾಜ ಗವಾಯಿ ಕ್ರೀಡಾಂಗಣದ ಒಳಾಂಗಣದಲ್ಲಿ ನಿರ್ಮಿಸಿರುವ ಕನ್ನಡ ಭವನದ ಮತ್ತು ಒಳಾಂಗಣ ಕ್ರೀಡಾಂಗಣಗಳ ಮುಂದುವರಿದ ಅಭಿವೃದ್ದಿ ಕಾಮಗಾರಿಗಳಿಗೆ ₹ 1.10 ಕೋಟಿ ಕಾಯ್ದಿರಿಸಲಾಗಿದೆ.

ವೃತ್ತಗಳ ಅಭಿವೃದ್ಧಿ:

ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಮುಖ ವೃತ್ತಗಳ ಅಭಿವೃದ್ಧಿಗೆ ₹ 5 ಕೋಟಿ, ಪ್ರಮುಖ ರಸ್ತೆ ಹಾಗೂ ಚರಂಡಿಗಳ ಅಭಿವೃದ್ಧಿಗೆ ₹ 30 ಕೋಟಿ, ನೀರು ಸರಬರಾಜು ಮತ್ತು ಒಳಚರಂಡಿಗಳ ಕೊಳವೆಮಾರ್ಗಗಳ ಅಭಿವೃದ್ಧಿಗೆ ₹ 30 ಕೋಟಿ ಕಾಯ್ದಿರಿಸಲಾಗಿದೆ.

ಪ್ರವಾಸಿಗರು ಹೆಚ್ಚು ಬರುವ ಹಾಗೂ ಜನನಿಬಿಡ ಪ್ರದೇಶದಲ್ಲಿ ಪಾರಂಪರಿಕ ಶೈಲಿಯಲ್ಲಿ 2 ಸುಸಜ್ಜಿತ ಶೌಚಾಲಯ ನಿರ್ಮಾಣಕ್ಕೆ ಯೋಜಿಸಲಾಗಿದೆ.

ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಜನಸಂದಣಿಯ ಪ್ರಮುಖ ಸ್ಥಳಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಾರುಕಟ್ಟೆಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಪಾಲಿಕೆಯ ಮುಖ್ಯ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದೆ. ಅದರಂತೆ ಎಲ್ಲ 9 ವಲಯ ಕಚೇರಿಗಳು ಹಾಗೂ ವಾಣಿವಿಲಾಸ ನೀರು ಸರಬರಾಜು ವಿಭಾಗ, ಮಾರುಕಟ್ಟೆ ವಿಭಾಗ, ಆಸ್ತಿ ವಿಭಾಗ ಮತ್ತು ಆಶ್ರಯ ವಿಭಾಗಗಳಲ್ಲಿ ಏ.1ರಿಂದ ‘ಇ-ಆಫೀಸ್’ ಅನುಷ್ಠಾನಕ್ಕೆ ಬರಲಿದೆ.

ಪಾಲಿಕೆಯ ಕೇಂದ್ರ ಕಚೇರಿಯ ಅಭಿಲೇಖಾಲಯದ ಎ, ಬಿ, ಸಿ, ಡಿ ವರ್ಗದ ಕಡತಗಳನ್ನು ‘ರೆಕಾರ್ಡ್ ಇಂಡೆಕ್ಷಿಂಗ್ ಆ್ಯಂಡ್ ಡಿಜಿಟೈಜೇಸನ್’ ತಂತ್ರಾಂಶ ಅಭಿವೃದ್ಧಿಪಡಿಸಿ ಸಂರಕ್ಷಿಸುವ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ, 12,87,133 ಪ್ರತಿಗಳನ್ನು ಗಣಕೀಕರಣಗೊಳಿಸಲಾಗಿದೆ. ಉಳಿದಂತೆ ಎಲ್ಲ ವಲಯ ಕಚೇರಿಗಳಲ್ಲಿನ ಹಾಗೂ ಆಸ್ತಿ ಶಾಖೆಯ ಎಲ್ಲಾ ದಾಖಲೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ₹ 50 ಲಕ್ಷ ಇಡಲಾಗಿದೆ.

ಪ್ರತಿ ವಾರ್ಡ್ನಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗುತ್ತದೆ. ನಾಗರಿಕರು ಈ ಕೋಡ್ ಸ್ಕ್ಯಾನ್ ಮಾಡಿದಾಗ, ಸಮಸ್ಯೆಗಳಿಗೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ನೇರವಾಗಿ ಪಡೆಯಬಹುದು. ನಾಗರಿಕರ ದೂರುಗಳಿಗೆ ಪಾಲ…

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.