ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸುಡು ಬಿಸಿಲನ್ನೂ ಲೆಕ್ಕಿಸದೆ, ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉತ್ಸಾಹದಿಂದ ವೀಕ್ಷಿಸಿದರು.

ಗುರುವಾರ ಬೆಳಿಗ್ಗೆ ಟಿ.ಕೆ.ಬಡಾವಣೆಯ ತಮ್ಮ ನಿವಾಸದಿಂದ ನಗರ ಪ್ರದಕ್ಷಿಣೆ ಹೊರಟ ಮುಖ್ಯಮಂತ್ರಿಗೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಹಾಗೂ ಶಾಸಕರು ಸಾಥ್ ನೀಡಿದರು.

ಮೊದಲಿಗೆ ಶ್ರೀರಾಂಪುರದ ನಾಯ್ಡು ಸ್ಟೋರ್ ಬಳಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಕೈಗೊಂಡಿರುವ 11 ಕೆ.ವಿ ಓವರ್ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್ಗೆ ಪರಿವರ್ತಿಸುವ ಕಾಮಗಾರಿ ಪರಿಶೀಲಿಸಿದರು. ಸೆಸ್ಕ್ ಅಧೀಕ್ಷಕ ಎಂಜಿನಿಯರ್ ಸುನಿಲ್ಕುಮಾರ್, ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಶಾಸಕ ಟಿ.ಎಸ್.ಶ್ರೀವತ್ಸ ಅವರು ಕ್ಷೇತ್ರಕ್ಕೆ ಆಗಬೇಕಿರುವ ಕಾಮಗಾರಿಗಳ ಕುರಿತು ಮನವಿ ಮಾಡಿದರು.

ಮಾನಂದವಾಡಿ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿ ವೀಕ್ಷಿಸಿದರು. ‘ಮೈಸೂರು ನಗರದಲ್ಲಿ ₹393.85 ಕೋಟಿ ವೆಚ್ಚದಲ್ಲಿ 12 ರಸ್ತೆಗಳ 46.88 ಕಿ.ಮೀ. ಉದ್ದದ ರಸ್ತೆ ಕಾಮಗಾರಿ ನಡೆಯಲಿದ್ದು, ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಯಲಿದೆ’ ಎಂದು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ ವಿವರಣೆ ನೀಡಿದರು. ‘ಕಾಮಗಾರಿ ಮುಗಿಯುತ್ತಿದ್ದಂತೆ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಗುವುದು. ಅಲ್ಲಿಯವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಮಾಡಲಿದೆ’ ಎಂದರು.

ಹಾಸ್ಟೆಲ್ ಕಾಮಗಾರಿ ವೀಕ್ಷಣೆ: ಮಹಾರಾಣಿ ಕಲಾ, ವಾಣಿಜ್ಯ ಕಾಲೇಜು ವಿದ್ಯಾರ್ಥಿನಿಯರಿಗೆ ನಿರ್ಮಿಸುತ್ತಿರುವ ವಿದ್ಯಾರ್ಥಿನಿಲಯದ ಕಾಮಗಾರಿಯನ್ನು ವೀಕ್ಷಿಸಿದರು. ಕಾಮಗಾರಿ ಕುರಿತಂತೆ ಕಾರ್ಯದರ್ಶಿ ಸತ್ಯನಾರಾಯಣ ವಿವರಿಸಿದರು.

ಬನ್ನಿಮಂಟಪದಲ್ಲಿ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನೂ ಮುಖ್ಯಮಂತ್ರಿ ಪರಿಶೀಲಿಸಿದರು. ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು. ಈ ವೇಳೆ, ಶಾಸಕ ತನ್ವೀರ್ ಸೇಠ್ ಖಾಸಗಿ ಬಸ್ ನಿಲ್ದಾಣವನ್ನು ಲಲಿತ ಮಹಲ್ ರಸ್ತೆಯ ಎಂಡಿಎ ಜಾಗಕ್ಕೆ ಸ್ಥಳಾಂತರ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿದರು.

ಶಾಸಕ ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಜಿ.ಪಂ. ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್, ವಿವಿಧ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-39-1350141475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.