ಮೈಸೂರು: ‘ಕಾಂಗ್ರೆಸ್ ಮುಖಂಡ ಆರ್. ಧರ್ಮಸೇನಾ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು’ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ವಿಭಾಗದ ಅಧ್ಯಕ್ಷ ಕೆ. ರಮೇಶ್ ಕೋರಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಆರ್. ಧರ್ಮಸೇನಾ ತಿ. ನರಸೀಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಜನಸೇವೆ ಮಾಡಿದ್ದಾರೆ. ಆದಿ ಜಾಂಬವ ಎಡಗೈ ಸಮಾಜದಲ್ಲಿ ಮೈಸೂರು ಭಾಗದಲ್ಲಿ ನಾಯಕತ್ವದ ಕೊರತೆ ಇದ್ದು, ಧರ್ಮಸೇನಾ ಅವರಿಗೆ ಅವಕಾಶ ನೀಡಬೇಕು’ ಎಂದು ಹೇಳಿದರು.

ಮುಖಂಡರಾದ ರಂಗನಾಥ್ ಪ್ರಸಾದ್, ಚಿಕ್ಕಣ್ಣ, ಶ್ರೀನಿವಾಸ್, ಶಶಿಕುಮಾರ್, ರೋಹಿಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-38-462197242

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.