ಮೈಸೂರು: ಇಲ್ಲಿನ ಕುವೆಂಪುನಗರದ ನಿವಾಸಿ, ಕಾಂಗ್ರೆಸ್ ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿದ್ದ ವಿಕ್ರಾಂತ್ ಪಿ.ದೇವೇಗೌಡ (64) ಅನಾರೋಗ್ಯದಿಂದ ಕುವೆಂಪುನಗರದ ಅಪೊಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ನಿಧನರಾದರು.

ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು, ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ.

ಮೂಲತಃ ಕೆ.ಜಿ. ಕೊಪ್ಪಲಿನವರಾದ (ಜಯನಗರ) ದೇವೇಗೌಡ, ವಿಕ್ರಾಂತ್ ಟೈರ್ಸ್ (ಈಗಿನ ಜೆ.ಕೆ. ಟೈರ್ಸ್) ಕಾರ್ಖಾನೆಯಲ್ಲಿ ಹಲವು ವರ್ಷಗಳವರೆಗೆ ಕೆಲಸ ಮಾಡಿದ್ದರು. ಅಲ್ಲಿ ಸ್ವಯಂ ನಿವೃತ್ತಿ ಪಡೆದು ‘ವೆಂಕಟೇಶ್ವರ ಟ್ರೇಡರ್ಸ್’ ಎಂಬ ಬಣ್ಣದ ಅಂಗಡಿ ಇಟ್ಟುಕೊಂಡಿದ್ದರು. ಕೆಲಸ ಮಾಡಿದ್ದ ಕಾರ್ಖಾನೆಯ ಹೆಸರನ್ನು ತಮ್ಮ ಹೆಸರಿನೊಂದಿಗೆ ಸೇರಿಸಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಕಟ್ಟಾ ಅಭಿಮಾನಿಯಾಗಿ, ಅವರೊಂದಿಗೆ ಒಡನಾಟ ಹೊಂದಿದ್ದರು. ಅವರ ಹೆಸರಿನಲ್ಲಿ ಅಭಿಮಾನಿಗಳ ಬಳಗವನ್ನೇ ಕಟ್ಟಿದ್ದರು. ಅದರ ಮೂಲಕ ಸಮಾಜಸೇವಾ ಕಾರ್ಯದಲ್ಲೂ ತೊಡಗಿಸಿಕೊಂಡು ಗಮನಸೆಳೆದಿದ್ದರು.

ಮೈಸೂರು–ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು. ಸಮಾಜದ ಸಂಘಟನೆಯಲ್ಲೂ ಗುರುತಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.