ಮೈಸೂರು: ‘ ಕಾಂಗ್ರೆಸ್ ಚುನಾವಣೆ ಸಂದರ್ಭ ಸಾರಿಗೆ ಸಂಸ್ಥೆ ನೌಕರರಿಗೆ ನೀಡಿದ್ದ ಭರವಸೆ ಮರೆತಿದ್ದು, ಕಾರ್ಮಿಕ ಸಂಘಗಳ ನಡುವೆಯೇ ಒಡಕುಂಟು ಮಾಡಲು ಯತ್ನಿಸುತ್ತಿದೆ. ಸಂಸ್ಥೆಯ ಎಲ್ಲ ನೌಕರರ ಸಂಘಗಳು ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾದ ಅಗತ್ಯವಿದೆ’ ಎಂದು ಕೆಎಸ್ಆರ್ಟಿಸಿ ಸಾರಿಗೆ ನೌಕರರ ಕೂಟದ ರಾಜ್ಯ ಗೌರವ ಅಧ್ಯಕ್ಷ ಬಿ.ಎಸ್. ಸುರೇಶ್ ಹೇಳಿದರು.

‘ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಿಗೆ ಸಮಾನವಾದ ವೇತನ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ 2020ರ ಜನವರಿಯಿಂದ ಜಾರಿಯಾಗಬೇಕಾಗಿದ್ದ ವೇತನ ವಿಮರ್ಶೆಯನ್ನು 2023ರಲ್ಲಿ ಜಾರಿಗೆ ತಂದಿತು. ಇದರಿಂದ ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ಬದಲಿಗೆ 24 ತಿಂಗಳ ಹಿಂಬಾಕಿ ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ. ನೌಕರರ ಸಂಘಟನೆಗಳು ಒಗ್ಗೂಡಿ ಬೇಡಿಕೆ ಈಡೇರಿಕೆಗೆ ಹೋರಾಡಬೇಕು’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಕೋರಿದರು.

ಮಾಜಿ ಮೇಯರ್ ಪುರುಷೋತ್ತಮ್, ಒಕ್ಕೂಟದ ಪದಾಧಿಕಾರಿಗಳಾದ ಸಿ.ಡಿ. ವಿಶ್ವನಾಥ್, ನಾಗರಾಜ್ ಹಾಗೂ ಪರಶುರಾಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-39-2111763958

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.