ಮೈಸೂರು: ಚುನಾವಣಾ ಆಯೋಗವು ನಡೆಸಲಿರುವ ‘ಎಸ್ಐಆರ್’ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಸಂದರ್ಭದಲ್ಲಿ ಅರ್ಹ ಮತದಾರರಿಗೆ ತೊಂದರೆಯಾದರೆ, ಹೆಸರುಗಳನ್ನು ಅನಗತ್ಯವಾಗಿ ಕೈಬಿಟ್ಟರೆ ಅಂಥವರ ನೆರವಿಗೆ ನಿಲ್ಲುವುದಕ್ಕಾಗಿ ಬಿಎಲ್ಒಗಳು ಹಾಗೂ ಕಾರ್ಯಕರ್ತರ ಪಡೆ ಸಜ್ಜುಗೊಳಿಸಲು ಇಲ್ಲಿ ತೀರ್ಮಾನಿಸಲಾಯಿತು.

ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಇಲ್ಲಿನ ನಜರ್ಬಾದ್ನ ಜೆ.ಪಿ. ಫಾರ್ಚೂನ್ ಹೋಟೆಲ್ನಲ್ಲಿ ಮೈಸೂರು ನಗರ, ಮೈಸೂರು ಗ್ರಾಮಾಂತರ ಜಿಲ್ಲಾ ಘಟಕಗಳು ಮತ್ತು ಚಾಮರಾಜನಗರ, ಕೊಡಗು ಜಿಲ್ಲೆಗಳ ಪ್ರಮುಖರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ, ಮತದಾರರ ಪರವಾಗಿ ನಿಲ್ಲುವ ಸಂದೇಶವನ್ನು ಪ್ರಮುಖವಾಗಿ ಬಿಎಲ್ಎ (ಮತಗಟ್ಟೆ ಏಜೆಂಟರು)ಗಳಿಗೆ ನೀಡಲಾಯಿತು.

ಎಸ್ಐಆರ್ ವೇಳೆ ಹೇಗೆ ಕಾರ್ಯನಿರ್ವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕ್ಷೇತ್ರದ ಪ್ರಮುಖ ಐವರು ಪರಿಣತರು, ಬೂತ್ ಪ್ರಮುಖರಿಗೆ ತರಬೇತಿ ನೀಡಲಾಯಿತು. ಮತಗಟ್ಟೆ ಅಧಿಕಾರಿಗಳೊಂದಿಗೆ ಸಾಧಿಸಬೇಕಾದ ಸಂಪರ್ಕ, ಸಂವಹನ ಹಾಗೂ ಈ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮಾರ್ಗದರ್ಶನ ಮಾಡಲಾಯಿತು.

‘ಜಾಗೃತ ಕರ್ನಾಟಕ’ ಪ್ರತಿನಿಧಿಗಳು ತಾಂತ್ರಿಕ ಮಾಹಿತಿಯಿಂದ ಹಿಡಿದು ಎಲ್ಲ ಅಂಶಗಳ ಕುರಿತು ತಿಳಿವಳಿಕೆ ಮೂಡಿಸಿದರು.

ಧ್ಯೇಯವಾಗಲಿ: ‘ಈ ಕೆಲಸವನ್ನು ಪಕ್ಷದ ಕಾರ್ಯಕರ್ತರು, ಪ್ರಮುಖರು ಹಾಗೂ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಬೇಕು. ‘ಕಾಂಗ್ರೆಸ್ ನಡೆ ಮತದಾನದ ಹಕ್ಕಿನ ರಕ್ಷಣೆ ಕಡೆ’ ಎಂಬುದು ಮುಖ್ಯ ಧ್ಯೇಯವಾಗಬೇಕು. ಪ್ರಜ್ಞಾಪ್ರಭುತ್ವ ಹಾಸೂ ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕು’ ಎಂಬ ಸಂದೇಶವನ್ನು ನೀಡಲಾಯಿತು.

ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಮಾತನಾಡಿ, ‘ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿರುವುದನ್ನು ವಿರೋಧಿಸಿ ಪಕ್ಷದಿಂದ ಜಾಗೃತಿ ಮೂಡಿಸಲಾಗುತ್ತಿದೆ. ಇದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು. ಮುಂಬರುವ ಚುನಾವಣೆಯಲ್ಲಿ ಯಾರಿಗೋ ಅನುಕೂಲ ಮಾಡಿಕೊಡಲು ನಡೆಸುತ್ತಿರುವ ಕಾರ್ಯಕ್ರಮ ಇದಲ್ಲ. ಎಲ್ಲ ಮತದಾರರಿಗೆ ಅನುಕೂಲ ಕಲ್ಪಿಸುವಂಥದ್ದಾಗಿದೆ’ ಎಂದು ತಿಳಿಸಿದರು.

ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಕೆ.ಹರೀಶ್ಗೌಡ, ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ಪ್ರಸಾದ್, ಮಾಜಿ ಶಾಸಕರಾದ ಮರಿತಿಬ್ಬೇಗೌಡ, ಎಚ್.ಪಿ. ಮಂಜುನಾಥ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಮುಖಂಡರಾದ ನಿತಿನ್ ವೆಂಕಟೇಶ್, ಎಂ.ಶಿವಣ್ಣ, ಈಶ್ವರ ಚಕ್ಕಡಿ, ಪುಷ್ಪಲತಾ ಚಿಕ್ಕಣ್ಣ, ಲತಾ ಸಿದ್ದಶೆಟ್ಟಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-39-1011744517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.