ಮೈಸೂರು: ‘ಭ್ರಷ್ಟ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರಕ್ಷಿಸುತ್ತಿದ್ದಾರೆ’ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಆರೋಪಿಸಿದರು.

‘ವ್ಯಭಿಚಾರ, ದರೋಡೆ, ಭ್ರಷ್ಟಾಚಾರದಂತಹ ಪ್ರಕರಣಗಳಲ್ಲಿ ಭಾಗಿಯಾದ ಅಧಿಕಾರಿಗಳಿಗೆ ಸರ್ಕಾರವೇ ಗೌರವ ಕೊಡುತ್ತಿದೆ. ಇಂತಹ ಸನ್ನಿವೇಶವನ್ನು ನನ್ನ ರಾಜಕೀಯ ಜೀವನದಲ್ಲಿ ಎಂದೂ ನೋಡಿರಲಿಲ್ಲ’ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಜತೆ ಅನುಚಿತವಾಗಿ ನಡೆದು ಕೊಂಡಿದ್ದರು. ಅದರ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಪ್ರಕರಣ ಹಾಗೂ ಇಲವಾಲ ಜಂಕ್ಷನ್ನಲ್ಲಿ ನಡೆದ ದರೋಡೆ ಕೇಸ್ನಲ್ಲೂ ಕ್ಲೀನ್ ಚಿಟ್ ನೀಡಿ ಮತ್ತೆ ಅವರನ್ನು ಸೇವೆಗೆ ಸೇರಿಸಿಕೊಳ್ಳಲಾಗಿದೆ’ ಎಂದರು.

‘ಮಹಿಳಾ ಐಎಎಸ್ ಅಧಿಕಾರಿ ಪಾರಂಪರಿಕ ಕಟ್ಟಡದ ಅನಧಿಕೃತ ನವೀಕರಣ, ಪೀಠೋಪಕರಣ ಕಳ್ಳತನ, ಅಧಿಕಾರ ದುರುಪಯೋಗದಂತಹ ಅನೇಕ ಅಕ್ರಮಗಳನ್ನು ಎಸಗಿದ್ದರು. ಹೈಕೋರ್ಟ್ ತೀರ್ಪಿನ ಬಳಿಕ ಸುಪ್ರೀಂಕೋರ್ಟ್ಗೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ವೈದ್ಯಕೀಯ ಆಮ್ಲಜನಕ ದೊರಕದೆ 32 ಜನರು ಮೃತಪಟ್ಟರು. ಅದಕ್ಕೆ ಕಾರಣರಾದವರ ವಿರುದ್ಧ ಸರ್ಕಾರ ಏನು ಕ್ರಮ ಕೈಗೊಂಡಿದೆ? ವೀರಾವೇಷದಿಂದ ತನಿಖೆಗೆ ಆಗ್ರಹಿಸಿದ್ದ ಸಿದ್ದರಾಮಯ್ಯ ಅವರೇ ತನಿಖಾ ವರದಿ ಏನಾಯಿತು ? ಮುಖ್ಯ ಕಾರ್ಯದರ್ಶಿ ಯಾವ ಒತ್ತಡಕ್ಕೆ ಮಣಿದು ಸುಮ್ಮನಾದರು’ ಎಂದು ಪ್ರಶ್ನಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-1908643231

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.