ಮೈಸೂರು: ಟಿ.ಕೆ. ಲೇಔಟ್ನಲ್ಲಿರುವ ಅಮೃತ್ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೊದಲ ಮಹಡಿಯಲ್ಲಿ ಮಂಗಳವಾರ ರಾತ್ರಿ ಅಡುಗೆ ಮಾಡಲು ತಯಾರಿ ನಡೆಸಿದ್ದರು. ಮನೆಯ ಹಾಲ್ಗೆ ಸಿಲಿಂಡರ್ ತಂದಿಟ್ಟಿದ್ದರು. ರಾತ್ರಿ ಸುಮಾರು 9ರ ಸಮಯದಲ್ಲಿ ಅದರ ಪೈಪ್ಗೆ ಬೆಂಕಿ ಹತ್ತಿಕೊಂಡಿದ್ದು, ಗಾಬರಿಗೊಂಡ ಮನೆಯವರು ಹೊರಗಡೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಮನೆಯ ಇನ್ನೊಂದು ಕಡೆ ಮತ್ತೊಂದು ಸಿಲಿಂಡರ್ ಇಟ್ಟಿದ್ದು, ಅದಕ್ಕೆ ಹಾನಿಯಾಗಿಲ್ಲ. ‘ಮನೆಯಲ್ಲಿ 7 ಜನದ್ದರು, ಸಿಲಿಂಡರ್ ಸ್ಫೋಟಗೊಂಡ ತಕ್ಷಣವೇ ಎಲ್ಲರೂ ಹೊರಬಂದರು. ಮನೆಯ ಒಳಗಿದ್ದ ಫ್ರಿಡ್ಜ್, ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣವೇ ದಟ್ಟ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಮಾಹಿತಿ ಪಡೆದ ಸರಸ್ವತಿಪುರಂ ಅಗ್ನಿಶಾಮಕದಳದವರು ಸ್ಥಳಕ್ಕೆ ಬಂದರು. ಒಂದು ಗಂಟೆ ನಿರಂತರ ಪ್ರಯತ್ನದ ಬಳಿಕ ಬೆಂಕಿ ನಂದಿಸುವಲ್ಲಿ ಸಫಲರಾದರು. ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-39-1195256234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.