ಮೈಸೂರು: ‘ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ನೀಡಿದ ಕೊಡುಗೆಗಳನ್ನು ಮರೆಯಲಾಗದು’ ಎಂದು ನಿವೃತ್ತ ಪ್ರಾಧ್ಯಾಪಕ ಟಿ.ಎಚ್. ಮೂರ್ತಿ ಹೇಳಿದರು.

ಇಲ್ಲಿನ ಮಾನಸಗಂಗೋತ್ರಿಯ ಡಿ.ದೇವರಾಜ ಅರಸು ಅಧ್ಯಯನ ಪೀಠದ ಅಭಿವೃದ್ಧಿ ಅಧ್ಯಯನ ಸಂಸ್ಥೆಯಲ್ಲಿ ಬುಧವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜೀತ, ಜಮೀನ್ದಾರಿಕೆ ಮತ್ತು ಮಲ ಹೊರುವ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಅವರು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಲು ಶ್ರಮಿಸಿದರು. ಅತಿ ಹಿಂದುಳಿದ ಸಮುದಾಯಗಳಿಗೆ ರಾಜಕೀಯವಾಗಿ ಶಕ್ತಿ ನೀಡುವ ಕೆಲಸ ಮಾಡಿದರು. ಹಲವು ನಾಯಕರನ್ನು ರೂಪಿಸಿದ ಕೀರ್ತಿ ಅವರದು’ ಎಂದು ಸ್ಮರಿಸಿದರು.

‘ಅವರ ಆದರ್ಶ ಗುಣಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ’ ಎಂದರು.

ಡಿ.ದೇವರಾಜ ಅರಸು ಅಧ್ಯಯನ ಪೀಠದ ನಿರ್ದೇಶಕ ಪ್ರೊ.ಎಚ್.ಎಂ. ಚಂದ್ರಶೇಖರ್ ಮಾತನಾಡಿದರು. ಡಿ.ದೇವರಾಜ ಅರಸು ಅಧ್ಯಯನ ಪೀಠ ಅಭಿವೃದ್ಧಿ ಅಧ್ಯಯನ ಸಂಸ್ಥೆ ಸಂದರ್ಶಕ ಪ್ರಾಧ್ಯಾಪಕ ಎಂ.ಬಿ. ಲಿಂಗರಾಜು, ಪ್ರೊ.ಎಂ. ಮೀರಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-39-414442731

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.